ಭಾರತಕ್ಕೆ ಒಬಾಮ ಭೇಟಿ: ಪಾಕ್‌ಗೆ ಅಮೆರಿಕ ಎಚ್ಚರಿಕೆ

ಒಬಾಮಾ ಭಾರತಕ್ಕೆ ಭೇಟಿ ನೀಡಿದ ವೇಳೆ ಯಾವುದೇ ವಿಧ್ವಂಸಕ ಕೃತ್ಯ ನಡೆದರೇ ಅದಕ್ಕೆ...
ಬರಾಕ್ ಒಬಾಮ
ಬರಾಕ್ ಒಬಾಮ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಭೇಟಿ ನೀಡಿದ ವೇಳೆ ಯಾವುದೇ ವಿಧ್ವಂಸಕ ಕೃತ್ಯ ನಡೆದರೇ ಅದಕ್ಕೆ ಪಾಕಿಸ್ತಾನವನ್ನೇ ನೇರ ಹೊಣೆ ಮಾಡಲಾಗುವುದು ಎಂದು ಪಾಕ್‌ಗೆ ಅಮೆರಿಕ ಎಚ್ಚರಿಸಿದೆ.

ಗಣರಾಜ್ಯೋತ್ಸವದ ಅತಿಥಿಯಾಗಿ ಭಾರತಕ್ಕೆ ಒಬಮಾ ಆಗಮಿಸುತ್ತಿದ್ದಾರೆ. ಆದರೆ, ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳನ್ನು ಒಬಮಾ ಭೇಟಿ ವೇಳೆ ದಾಳಿ ನಡೆಸಲು ಸಂಚು ರೂಪಿಸುತ್ತಿವೆ ಎಂಬ ಮಾಹಿತಿ ಹೊರಬಿದ್ದಿದೆ.

ಈ ಹಿನ್ನಲೆಯಲ್ಲಿ ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನಿಸಿರುವ ಅಮೆರಿಕ, ಒಬಮಾ ಭೇಟಿ ವೇಳೆ ಯಾವುದೇ ವಿಧ್ವಂಸಕ ಕೃತ್ಯ ನಡೆದರೆ ಅದಕ್ಕೆ ನಿಮ್ಮನ್ನೇ ನೇರ ಹೊಣೆ ಮಾಡಲಾಗುತ್ತದೆ. ಹಾಗಾಗಿ, ಯಾವುದೇ ವಿಧ್ವಂಸಕ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದೆ.

2000 ಮಾರ್ಚ್ 20ರಂದು ಅಂದಿನ ಅಮೆರಿಕದ ಅಧ್ಯಕ್ಷ ಬಿಲ್ ಕ್ಲಿಂಟನ್ ಭಾರತಕ್ಕೆ ಭೇಟಿ ನೀಡಿದ್ದಾಗ, ಪಾಕಿಸ್ತಾನದ ಉಗ್ರ ಸಂಘಟನೆಗಳು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ವಿಧ್ವಂಸಕ ದಾಳಿ ನಡೆಸಿ, 36 ಸಿಖ್ಖರನ್ನು ಹತ್ಯೆಗೈದಿದ್ದರು. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಅಮೆರಿಕ, ವಿಧ್ವಂಸಕ ಕೃತ್ಯ ಅದಕ್ಕೆ ನಿಮ್ಮನ್ನೇ ನೇರ ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com