

ಜೈಪುರ್: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ.
ಜಾಲೋರ್‌ನಿಂದ ಅಜ್ಮೇರ್‌ನ ಪುಷ್ಕರ್‌ಗೆ ತೆರಳುತ್ತಿದ್ದ ಕಾರು ಪಾಲಿ ಜಿಲ್ಲೆಯ ಇಚ್ಛಾಪೂರ್ಣ ಬಾಲಾಜಿ ದೇವಾಲಯದ ಬಳಿ ಬಂದಾಗ ಈ ದುರ್ಘಟನೆ ಸಂಭವಿಸಿದೆ.
ಈ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮಂದಿ ಹಾಗೂ ಮತ್ತೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಕಾರಿನಲ್ಲಿದ್ದ ಇತರ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಜೋತ್ ನಗರ ಪೊಲೀಸ್ ಠಾಣೆಯ ಅಧಿಕಾರಿ ಬನ್ವಾರ್ ರಣಧೀರ್ ಸಿಂಗ್ ಹೇಳಿದ್ದಾರೆ.