
ಧರ್ಮಪುರಿ: ಹೊಗೇನಕಲ್ ಬಳಿ ತಮಿಳುನಾಡು ಸಾರಿಗೆ ಸಂಸ್ಥೆಗೆ ಸೇರಿದ ಸರ್ಕಾರಿ ಬಸ್ ಕಂದಕಕ್ಕೆ ಉರುಳಿದ್ದು, ಕನಿಷ್ಟ 5 ಮಂದಿ ಮೃತಪಟ್ಟಿದ್ದಾರೆ.
ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಹೊಗೇನಕಲ್ ಬಳಿ ಈ ಅಫಘಾತ ಸಂಭವಿಸಿದ್ದು, ಬೆಟ್ಟದಿಂದ ಬಸ್ 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ. ಬಸ್‌ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಈ ಪೈಕಿ 5 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ ಎಂದು ತಿಳಿದುಬಂದಿದೆ.
Advertisement