ಕೇಜ್ರಿವಾಲ್ ಬರೀ ಮಾತಾಡ್ತಾರೆ, ನಾನು ಕೆಲಸ ಮಾಡುತ್ತೇನೆ: ಕಿರಣ್ ಬೇಡಿ

ನಿರೀಕ್ಷೆಯಂತೆ ಬಿಜೆಪಿ ಕಿರಣ್ ಬೇಡಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಮಾಜಿ ಐಆರ್‌ಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ...
ಕಿರಣ್ ಬೇಡಿ
ಕಿರಣ್ ಬೇಡಿ
Updated on: 

ನವದೆಹಲಿ: ನಿರೀಕ್ಷೆಯಂತೆ ಬಿಜೆಪಿ ಕಿರಣ್ ಬೇಡಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಮಾಜಿ ಐಆರ್‌ಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ನಡುವೆ ಈಗ ರಿಯಲ್ ವಾರ್ ಆರಂಭವಾಗಿದೆ.

ದೆಹಲಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ಬರುವಂತೆ ಅರವಿಂದ್ ಕೇಜ್ರಿವಾಲ್ ಅವರು ಕಿರಣ್ ಬೇಡಿ ಅವರಿಗೆ ಆಹ್ವಾನ ನೀಡಿದ್ದರು.

ಕೇಜ್ರಿವಾಲ್ ಆಹ್ವಾನವನ್ನು ನಾನು ಸ್ವೀಕರಿಸುತ್ತೇನೆ. ಆದರೆ ಚುನಾವಣೆಯ ನಂತರ ದೆಹಲಿಗೆ ಸಂಬಧಿಸಿದ ಚರ್ಚೆಗಳನ್ನು ವಿಧಾನಸಭೆಯಲ್ಲಿ ಚರ್ಚಿಸೋಣ ಎಂದಿದ್ದಾರೆ. ಅಲ್ಲದೆ ಅರವಿಂದ್ ಕೇಜ್ರಿವಾಲ್ ಅವರು ಚರ್ಚೆಯಲ್ಲಿ ನಂಬಿಕೆ ಇಟ್ಟಿದ್ದಾರೆ. ನಾನು ಸೇವೆಯಲ್ಲಿ ನಂಬಿಕೆ ಇಟ್ಟಿದ್ದೇನೆ ಎಂದು ಬೇಡಿ ಹೇಳಿದ್ದಾರೆ.

ನಾಲ್ಕು ದಿನಗಳ ಹಿಂದಷ್ಟೆ ಬಿಜೆಪಿ ಸೇರ್ಪಡೆಯಾಗಿದ್ದ ಕಿರಣ್ ಬೇಡಿ ಅವರನ್ನು ನಿನ್ನೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿತ್ತು. ಬೇಡಿ ಅವರು ದೆಹಲಿಯ ಕೃಷ್ಣ ನಗರದಿಂದ ವಿಧಾಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com