

ನವದೆಹಲಿ: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ್ ಅವರ ಭಾರತ ಭೇಟಿ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಇನ್ನಷ್ಟು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪಾಕ್ ಮೂಲದ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಗಡಿಯಲ್ಲಿ ದಾಳಿ ನಡೆಸುವ ಶಂಕೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗದುದ್ದಕ್ಕೂ ತೀವ್ರ ನಿಗಾವಹಿಸಲಾಗಿದ್ದು, ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಇದಕ್ಕಾಗಿ ಗಡಿ ರಕ್ಷಣಾ ಪಡೆಯ 12 ಹೆಚ್ಚುವರಿ ತುಕಡಿಯನ್ನು ಗಡಿ ನಿಯಂತ್ರಣ ರೇಖೆ ಬಳಿ ನಿಯೋಜಿಸಲಾಗಿದ್ದು, ಒಳನು ಸುಳುವಿಕೆಯನ್ನು ತಡೆಯವಲ್ಲಿಯೂ ಸಾಕಷ್ಟು ನಿಗಾ ವಹಿಸಲಾಗಿದೆ.