ಕಲ್ಲಿದ್ದಲು: ಸಿಂಗ್ ವಿಚಾರಣೆ ಕುರಿತ ಸ್ಪಷ್ಟನೆ ನೀಡಿದ ಕೈ

ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್...
ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್
ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್

ನವದೆಹಲಿ: ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ಬುಧವಾರ ಕಾಂಗ್ರೆಸ್ ಹೇಳಿದೆ.

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಅವರು, ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮನಮೋಹನ್ ಸಿಂಗ್ ಅವರನ್ನು ವಿಚಾರಣೆಗೊಳಪಡಿಸಿದ್ದರು. ಓರ್ವ ಜವಾಬ್ದಾರಿಯುತ ಪ್ರಜೆಯಾಗಿ ವಿಚಾರಣೆಗೆ ಸಹಕರಿಸುವುದು ಅವರ ಕರ್ತವ್ಯ. ಡಾ.ಸಿಂಗ್ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದು, ತನಿಖೆಗೆ ಸಹಕರಿಸಿದ ಅವರ ಗುಣ ಪ್ರಶಂಸಾರ್ಹ ಎಂದು ಹೇಳಿದರು..

ಹಿಂಡಾಲ್ಕೋ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಜ.27ರೊಳಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ಡಿ.16ರಂದು ವಿಶೇಷ ನ್ಯಾಯಾಲಯ ಸಿಬಿಐಗೆ ಸೂಚಿಸಿತ್ತು. ಅದರಂತೆ ವಿಚಾರಣೆ ಕೈಗೊಂಡಿದ್ದ ಸಿಬಿಐನ ಅಧಿಕಾರಿಗಳು ಎರಡು ದಿನಗಳ ಹಿಂದೆಯೇ ಸಿಂಗ್ ನಿವಾಸಕ್ಕೆ ತೆರಳಿ ಅವರನ್ನು ವಿಚಾರಣೆಗೊಳಪಡಿಸಿದ್ದರು. ಈ ವಿಚಾರದ ಕುರಿತಾದ ಮಾಹಿತಿಯನ್ನು ಹೊರಹಾಕಲು ಸಿಬಿಐ ನಿರಾಕರಿಸಿತ್ತು. ಅಲ್ಲದೆ, ಸಿಂಗ್ ಅವರ ಆಪ್ತರೊಬ್ಬರು ವಿಚಾರಣೆ ನಡೆದೇ ಇಲ್ಲ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com