ಸುನಂದಾ ಸಾವು ಪ್ರಕರಣ: ಪತ್ರಕರ್ತರ ವಿಚಾರಣೆ ಸಾಧ್ಯತೆ

ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೆ, ದೆಹಲಿ ಪೊಲೀಸರು...
ಸುನಂದಾ ಸಾವು ಪ್ರಕರಣ: ಪತ್ರಕರ್ತರ ವಿಚಾರಣೆ ಸಾಧ್ಯತೆ
Updated on: 

ನವದೆಹಲಿ: ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೆ, ದೆಹಲಿ ಪೊಲೀಸರು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ಅವರು ಮಾತನಾಡಿ, ಸುನಂದಾ ಪುಷ್ಕರ್ ಸಾವು ಪ್ರಕರಣದ ಸಂಬಂಧ ಕೆಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾವಿನ ಮುನ್ನಾ ದಿನ ಪುಷ್ಕರ್ ಪತ್ರಕರ್ತರೊಂದಿಗೆ ನಡೆಸಿದ್ದರು. ಆ ಪತ್ರಕರ್ತರನ್ನು ಸದ್ಯದಲ್ಲೇ ವಿಚಾರಣೆಗೊಳಪಡಿಸಲಾಗುವುದು. ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಮತ್ತಷ್ಟು ಮಾಹಿತಿ ಸಿಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತರೂರ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ವೇಳೆ ತರೂರ್ ನೀಡಿದ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದು, ಅಗತ್ಯಬಿದ್ದರೆ ಮತ್ತೆ ಅವರನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದರು.

ಕಳೆದ ವರ್ಷ ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಸುನಂದಾ ಪುಷ್ಕರ್ ಸಾವಿಗೆ ಸಂಬಂಧಿಸಿ ದೆಹಲಿ ಪೊಲೀಸರು ಇತ್ತೀಚೆಗಷ್ಟೆ ಹತ್ಯೆ ಪ್ರಕರಣ ದಾಖಲಿಸಿದ್ದರು. ಈ ಸಂಬಧ ತರೂರ್ ಅವರನ್ನು ಮರು ವಿಚಾರಣೆ ನಡೆಸುವ ಸುಳಿವು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com