
ನವದೆಹಲಿ: ಸ್ಥಳೀಯ ಬಿಜೆಪಿ ನಾಯಕರ ವಿರೋಧ ಕಟ್ಟಿಕೊಂಡೇ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ಸಿಎಂ ಅಭ್ಯರ್ಥಿ ಎಂದು ಬಿಂಬಿಸಿರುವ ಬಿಜೆಪಿಗೆ ಮತ್ತೊಂದು ಮುಖಭಂಗ ಉಂಟಾಗಿದೆ.
ಬೇಡಿ ಅವರು ಚುನಾವಣಾ ಆಯೋಗ ನೀಡಿದ 2 ಗುರುತು ಚೀಟಿಗಳನ್ನು ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಬಿsಸಿದೆ. ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖ್ಯಮಂತ್ರಿ ಭ್ಯರ್ಥಿ ತಮ್ಮ ವಿರುದ್ಧ ಆರೋಪಗಳನ್ನು ತಳ್ಳಿಹಾಕಿದ್ದಾರೆ.
ಒಂದು ವೇಳೆ ಬೇಡಿ ಎರಡು ಗುರುತಿನ ಚೀಟಿ ಹೊಂದಿದ್ದರೆ ಒಂದನ್ನು ರದ್ದು ಮಾಡುವ ಬಗ್ಗೆ ಅರ್ಜಿ ಸಲ್ಲಿಸಬಹುದಿತ್ತು.
ಒಂದು ವೇಳೆ ಬಿಜೆಪಿ ನಾಯಕಿ ಆ ರೀತಿ ಮಾಡದೇ ಇದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್ ಮತ್ತು ಆಪ್ ಕೂಡ ಬೇಡಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ.
ವರಿಷ್ಠರಿಗೆ ತಲೆನೋವು:
ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರು ಪ್ರತಿಸ್ಪರ್ಧಿ ಅರವಿಂದ್ ಕೇಜ್ರಿವಾಲ್ ಅವರ ಸರಿಸಮಾನವಾಗಿ ಜನರನ್ನು ಸೆಳೆಯುವಲ್ಲಿ ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷವೀಗ ಹಿರಿಯ ನಾಯಕರನ್ನು ದೆಹಲಿ ಚುನಾವಣಾ ಪ್ರಚಾರಕ್ಕೆ ದೆಹಲಿಯ ಹಿರಿಯ ಮುಖಂಡರು ಬೇಡಿ ಅವರಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ಬಿಜೆಪಿ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಸದ್ಯ 11 ಕೇಂದ್ರ ಸಚಿವರು ಮತ್ತು 17 ಸಂಸದರನ್ನು ಚುನಾವಣಾ ಪ್ರಚಾರ ಕ್ಕಾಗಿ ತೊಡಗಿಸಿಕೊಳ್ಳಲಾಗಿದೆ.
ಚುನಾವಣೆಗಿನ್ನು 10 ದಿನವಷ್ಟೇ ಬಾಕಿ ಇದೆ. ಆದರೆ, ದೆಹಲಿಯ ಹಿರಿಯ ಮುಖಂಡರು ಮಾತ್ರ ಪ್ರಚಾರದ ವಿಚಾರದಲ್ಲಿ ನಿರಾಸಕ್ತಿ ತೋರಿಸುತ್ತಿರುವುದು ಬೇಡಿಗೆ ಹಿನ್ನಡೆಯಾಗುವಂತೆ ಮಾಡಿದೆ.
ಕುಟುಕು ಕಾರ್ಯಾಚರಣೆ:
ಚುನಾವಣೆ ವೇಳೆ ಪಕ್ಷದ ಅಭ್ಯರ್ಥಿಗಳ ವಿರುದ್ಧ ಅಪಪ್ರಚಾರ ನಡೆಸಲು ನಕಲಿ ಕುಟುಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರತಿಪಕ್ಷಗಳ ನಾಯಕರು ಇಂಥ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಆಪ್ ನಾಯಕ ಅರವಿಂದ ಕೇಜ್ರಿವಾಲ್ ದೂರಿದ್ದಾರೆ.
ಆಯೋಗಕ್ಕೆ ಸೆಡ್ಡು: ಕಾಂಗ್ರೆಸ್ ಮತ್ತು ಬಿಜೆಪಿ
ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಕೇಜ್ರಿವಾಲ್ ಮಾಡಿದ್ದ ಆರೋಪಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿತ್ತು. ಅಂಥ ವರ್ತನೆ ಮುಂದುವರಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿತ್ತು. ಆದೇಶದ ವಿರುದ್ಧ ಆಪ್ ಚುನಾವಣೆ ಬಳಿಕ ದೆಹಲಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲಿದೆ.
Advertisement