ಪಾಕ್‌ನ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ: 49ಕ್ಕೇರಿದ ಮೃತರ ಸಂಖ್ಯೆ

ಬಾಂಬ್ ಸ್ಫೋಟ
ಬಾಂಬ್ ಸ್ಫೋಟ

ಕರಾಚಿ: ಪಾಕಿಸ್ತಾನದ ಶಿಕಾರಪುರ ನಗರದ ಮಧ್ಯಭಾಗದಲ್ಲಿರುವ ಶಿಯಾ ಮಸೀದಿಯೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಮೃತಪಟ್ಟವರ ಸಂಖ್ಯೆ 49ಕ್ಕೇರಿದೆ.

ಪಾಕಿಸ್ತಾನದ ಕರಾಚಿಯಿಂದ 500 ಕಿ.ಮೀ ದೂರದಲ್ಲಿರುವ ಶಿಕಾರಪುರದ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಬಾಂಬ್ ದಾಳಿಯಲ್ಲಿ 49 ಮಂದಿ ಮೃತಪಟ್ಟಿದ್ದು, ನಲವತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರವಾದ ಇಂದು ಶಿಯಾ ಮಸೀದಿಯಲ್ಲಿ ಮುಸ್ಲಿಂರು ಸಾಮೂಹಿಕ ಪ್ರಾರ್ಥನೆ ಸಂದರ್ಭದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಸ್ಥಳಿಯ ಪೊಲೀಸ್ ಅಧಿಕಾರಿ ಶಕಿಬ್ ಇಸ್ಮೈಲ್ ಮೆಮೋನ್ ತಿಳಿಸಿದ್ದಾರೆ.



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com