ರಾಷ್ಟ್ರಪಿತನಿಗೆ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪುಣ್ಯತಿಥಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿಗೆ ನಮನ ಸಲ್ಲಿಸಿದ್ದಾರೆ...
ರಾಷ್ಟ್ರಪಿತನಿಗೆ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪುಣ್ಯತಿಥಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿಗೆ ನಮನ ಸಲ್ಲಿಸಿದ್ದಾರೆ.

ಮಹಾತ್ಮಾ ಗಾಂಧೀಜಿಯವರ ಪುಣ್ಯತಿಥಿಯಾದ ಶುಕ್ರವಾರ ರಾಷ್ಟ್ರಾದ್ಯಂತ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪೂಜ್ಯ ಬಾಪುವಿಗೆ ನನ್ನ ನಮನಗಳು ಎಂದಿದ್ದಾರೆ.

ದೇಶಾದ್ಯಂತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಎಲ್ಲಾ ಹುತಾತ್ಮರಿಗೂ ನನ್ನ ನಮನಗಳು ಸಲ್ಲಿಸುತ್ತೇನೆ. ಹುತಾತ್ಮರ ಶೌರ್ಯ ಮತ್ತು ಧೈರ್ಯ ಎಲ್ಲರಿಗೂ ಪ್ರೇರಣೆ ಎಂದು ಮೋದಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com