
ಕೊಲ್ಕತಾ: ಬಹುಕೋಟಿ ಶಾರದ ಚಿಟ್‌ಫಂಡ್ ಹಗರಣ ಸಂಬಂಧ ಕಾಂಗ್ರೆಸ್ ಮಾಜಿ ಸಚಿವ ಮತಂಗ್ ಸಿಂಗ್ ರನ್ನು ಸಿಬಿಐ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಕಾಂಗ್ರೆಸ್ನ ಮಾಜಿ ಸಚಿವ ಮತಂಗ್ ಸಿಂಗ್ ರನ್ನು ಸಂಜೆ ಸಿಬಿಐ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂತಗ್ ಸಿಂಗ್ ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿ ಕಾರ್ಯಾನಿರ್ವಹಿಸಿದ್ದರು.
ಪ್ರಕರಣಕ್ಕೆ ಸಂಬಧಿಸಿದಂತೆ ಸಿಬಿಐ ಅಧಿಕಾರಿಗಳು ಇದಕ್ಕೂ ಮುನ್ನ ಹಲವಾರು ಟಿಎಂಸಿ ನಾಯಕರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.
ಶಾರದ ಗ್ರೂಪ್ ಚಿಟ್‌ಫಂಡ್ ಕಂಪನಿ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಅಸ್ಸಾಂನಲ್ಲಿ ಲಕ್ಷಾಂತರ ಜನರಿಗೆ 25,000 ಕೋಟಿ ರು. ವಂಚನೆ ಮಾಡಿತ್ತು. ಈ ಹಗರಣದಲ್ಲಿ ಅನೇಕ ರಾಜಕೀಯ ಪ್ರತಿನಿಧಿಗಳ ಹೆಸರು ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಸಿಬಿಐ ತನಿಖೆ ಕೈಗೊಂಡಿತ್ತು.
Advertisement