
ನವದೆಹಲಿ: ಆಮ್ ಆದ್ಮಿ ಪಕ್ಷ, ಪ್ರಸಕ್ತ ಹಣಕಾಸು ವರ್ಷದಲ್ಲಿ ರೇಡಿಯೋ ಜಾಹಿರಾತುಗಳಿಗೆ ಬರೋಬ್ಬರಿ 520 ಕೋಟಿ ರೂಪಾಯಿ ಖರ್ಚು ಮಾಡಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಅಭಿವೃದ್ಧಿಗಾಗಿ ಕೈಗೊಂಡಿರುವ ಕ್ರಮಗಳನ್ನು ದೆಹಲಿ ಜನತೆಗೆ ತಲುಪಿಸುವುದಕ್ಕಾಗಿ ರೇಡಿಯೋ ಜಾಹೀರಾತುಗಳನ್ನು ನೀಡಲಾಗಿದೆ.
ಜೋ ಕಹಾ, ಸೋ ಕಿಯಾ( ಹೇಳಿದ್ದನ್ನು ಮಾಡಿದ್ದೇವೆ) ಎಂಬ ಟ್ಯಾಗ್ ಲೈನ್ ಹೊಂದಿರುವ ಜಾಹೀರಾತನ್ನು ಪ್ರಸಾರ ಮಾಡಲಾಗುತ್ತಿದ್ದು, ದೆಹಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತಿದೆ.
ಪತ್ರಿಕೆಗಳಲ್ಲಿ ಪ್ರಕಟವಾಗುವ ಸರ್ಕಾರಿ ಜಾಹೀರಾತಿನಲ್ಲಿ ರಾಷ್ಟ್ರಪತಿ, ಪ್ರಧಾನಿ ಹಾಗೂ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಭಾವಚಿತ್ರವನ್ನು ಹೊರತುಪಡಿಸಿ ಮುಖ್ಯಮಂತ್ರಿಗಳು ಸಚಿವರ ಭಾವಚಿತ್ರವನ್ನು ಪ್ರಕಟಿಸಬಾರದು ಎಂದು ಸುಪ್ರೀಂ ಕೋರ್ಟ್ ಕೆಲವು ತಿಂಗಳ ಹಿಂದೆ ಮಹತ್ವದ ಆದೇಶ ನೀಡಿತ್ತು. ಅರವಿಂದ್ ಕೇಜ್ರಿವಾಲ್ ರೇಡಿಯೋಗಳ ಮೂಲಕ ತಮ್ಮ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುತ್ತಿದ್ದು ಇದಕ್ಕಾಗಿ 520 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ.
Advertisement