ಸ್ವ-ಪ್ರಚಾರಕ್ಕೆ ಸರ್ಕಾರಿ ಹಣ ಬಳಸಿದರೂ ಅದು ಭ್ರಷ್ಟಚಾರವೇ: ಕಾಂಗ್ರೆಸ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಸ್ವ-ಪ್ರಚಾರಕ್ಕಾಗಿ ಸರ್ಕಾರಿ ಹಣವನ್ನು ಬಳಸುತ್ತಿದ್ದು, ಸಾರ್ವಜನಿಕವಾಗಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಗುರುವಾರ ಹೇಳಿದೆ...
ಕಾಂಗ್ರೆಸ್ ನಾಯಕ ಅಜಯ್ ಮಕೇನ್
ಕಾಂಗ್ರೆಸ್ ನಾಯಕ ಅಜಯ್ ಮಕೇನ್

ನವದೆಹೆಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಸ್ವ-ಪ್ರಚಾರಕ್ಕಾಗಿ ಸರ್ಕಾರಿ ಹಣವನ್ನು ಬಳಸುತ್ತಿದ್ದು, ಸಾರ್ವಜನಿಕವಾಗಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಗುರುವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ನಾಯಕ ಅಜಯ್ ಮಕೇನ್, ದೆಹಲಿ ಸರ್ಕಾರ ಜನರಿಗಾಗಿ ಕೆಲಸ ಮಾಡುವುದಕ್ಕಿಂತ ಹೆಚ್ಚಾಗಿ ಸ್ವ ಪ್ರಚಾರ ಕಾರ್ಯವನ್ನು ಚೆನ್ನಾಗಿ ಮಾಡುತ್ತಿದೆ. ಆಮ್ ಆದ್ಮಿ ಪಕ್ಷ ಸರ್ಕಾರೀ ಹಣವನ್ನು ಸ್ವಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ಸರ್ಕಾರಿ ಹಣವನ್ನು ಸ್ವಪ್ರಚಾರಕ್ಕೆ ಬಳಸಿಕೊಳ್ಳುವುದು ಕೂಡ ಒಂದು ರೀತಿಯ ಭ್ರಷ್ಟಚಾರವೇ.ಆಮ್ ಪಕ್ಷ ಜನರಿಗಾಗಿ ಖರ್ಚು ಮಾಡಬೇಕಿದ್ದ ಹಣವನ್ನು ತನ್ನ ಪಕ್ಷದ ಕಾರ್ಯಕರ್ತರಿಗೆ ಖರ್ಚು ಮಾಡುತ್ತಿದೆ. ಇದು ಪರೋಕ್ಷವಾದ ಭ್ರಷ್ಟಾಚಾರವೇ ಆಗಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಈ ಕುರಿತಂತೆ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.

ಬಜೆಟ್ ಮಂಡನೆ ವೇಳೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಆಪ್ ಘೋಷಿಸಿತ್ತು. ಆದರೆ, ಈವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳು ಚಾಲನೆಗೆ ಬಂದಿಲ್ಲ. ಸಾರಿಗೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ಯಾವುದೇ ಬೆಳವಣಿಗೆಗಳಾಗಿಲ್ಲ. ಆದರೆ, ಈಗಾಗಲೇ 526 ಕೋಟಿ ಹಣ ವ್ಯಯಿಸಲಾಗಿದೆ ಎಂದು ಆಪ್ ಹೇಳುತ್ತಿದೆ. ಈ ಹಣವನ್ನು ಯಾವ ಕಾರ್ಯಕ್ಕೆ ಬಳಸಲಾಯಿತು ಎಂದು ಪ್ರಶ್ನಿಸಿದ್ದಾರೆ.

ಮೂಲಗಳ ಪ್ರಕಾರ, ದೆಹಲಿ ಸರ್ಕಾರ ತನ್ನ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಲೆಂದು ಇತ್ತೀಚೆಗಷ್ಟೇ ಮಾಧ್ಯಮವೊಂದರಲ್ಲಿ ಸರ್ಕಾರಿ ಜಾಹಿರಾತು ಅಭಿಯಾನವೊಂದನ್ನು ಪ್ರಾರಂಭಿಸಿತ್ತು. ಇದರಲ್ಲಿ ಸರ್ಕಾರಿ ಜಾಹೀರಾತಿಗಾಗಿಯೇ 520 ಕೋಟಿ ಹಣವನ್ನು ಆಪ್ ಖರ್ಚು ಮಾಡಿದೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com