ಮೋದಿಯ ಡಿಜಿಟಲ್ ಇಂಡಿಯಾ ಸಪ್ತಾಹ ರಾಜೀವ್ ಗಾಂಧಿಯದ್ದು: ಗಗೊಯ್

ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ ಯೋಜನೆಯೆಂದು ಹೇಳಿಕೊಳ್ಳುತ್ತಿರುವ ಡಿಜಿಟಲ್ ಇಂಡಿಯಾ ಸಪ್ತಾಹ...
ತರುಣ್ ಗಗೊಯ್
ತರುಣ್ ಗಗೊಯ್
Updated on

ಗುವಾಹಟಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಕನಸಿನ ಯೋಜನೆಯೆಂದು ಹೇಳಿಕೊಳ್ಳುತ್ತಿರುವ ಡಿಜಿಟಲ್ ಇಂಡಿಯಾ ಸಪ್ತಾಹ ಮೋದಿ ಅವರದ್ದಲ್ಲ, ಬಹಳ ಹಿಂದೆಯೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಆರಂಭಿಸಿದ್ದರು ಎಂದು ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೊಯ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ತರುಣ್ ಗಗೊಯ್ ಡಿಜಿಟಲ್ ಇಂಡಿಯಾ ತಮ್ಮ ಮಹತ್ವಕಾಂಕ್ಷೆಯ ಯೋಜನೆ ಎಂದು ಮೋದಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿ ಬಹಳ ಹಿಂದೆಯೇ ಈ ಯೋಜನೆಯನ್ನು ಆರಂಭಿಸಿದ್ದರು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಮಹಿಳಾ ಅಭಿವೃದ್ಧಿ ನಿಗಮ ಮತ್ತು ಗ್ರಾಮೀಣ ಅಭಿೃವೃದ್ಧಿ ನಿಗಮಗಳ ಬೆಳವಣಿಗೆಯ ವೇಗವನ್ನು ಹಿಂದೆಯೇ ಹೆಚ್ಚಿಸಲಾಗಿತ್ತು. ನಿನ್ನೆ ದೆಹಲಿಯಲ್ಲಿ ಡಿಜಿಟಲ್ ಇಂಡಿಯಾ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ನರೇಂದ್ರ ಮೋದಿ ಮಾಹಿತಿ ತಂತ್ರಜ್ಞಾನದ ಬಳಕೆ ಮೂಲಕ ದೇಶದ ನಾಗರಿಕರ ಸಬಲೀಕರಣವಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com