ವ್ಯಾಪಂ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲ್ಲ: ಸಿಎಂ ಚೌಹಾನ್

ನಮ್ಮ ಸರ್ಕಾರ ನ್ಯಾಯಾಂಗಕ್ಕಿಂತ ದೊಡ್ಡದಲ್ಲ ಎಂದಿರುವ ಮುಖ್ಯಮಂತ್ರಿಗಳು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ವಿಚಾರವಾಗಿ ಹೈಕೋರ್ಟ್ ನಿರಾಕರಿಸಿದ್ದು...
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್

ಭೂಪಾಲ್: ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ(ವ್ಯಾಪಂ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ 45 ಮಂದಿ ನಿಗೂಢವಾಗಿ ಸಾವನ್ನಪ್ಪಿದ್ದರೆ. ಪ್ರತಿಪಕ್ಷಗಳು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಡ ಹೇರುತ್ತಿದ್ದರೆ ಮತ್ತೊಂದೆಡೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರು ಪ್ರಕರಣವನ್ನು ಸಿಬಿಐಗೆ ಶಿಫಾರಸ್ಸು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ನ್ಯಾಯಾಂಗಕ್ಕಿಂತ ದೊಡ್ಡದಲ್ಲ ಎಂದಿರುವ ಮುಖ್ಯಮಂತ್ರಿಗಳು,
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ವಿಚಾರವಾಗಿ ಹೈಕೋರ್ಟ್ ನಿರಾಕರಿಸಿದ್ದು, ನಾನು ಹೇಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್ ನ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ದಳ(ಎಸ್ಐಟಿ) ತನಿಖೆ ಮಾಡುತ್ತಿದ್ದು, ಒಂದು ವೇಳೆ ಕೋರ್ಟ್ ಮತ್ತೊಂದು ತನಿಖಾ ತಂಡ ತನಿಖೆ ಮಾಡುವಂತೆ ಸಮ್ಮತಿಸಿದರೆ ಆಗ ಯೋಜನೆ ಮಾಡಲಾಗುವುದು ಎಂದರು.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಬಯಸುವ ತನಿಖಾ ಸಂಸ್ಥೆಯಿಂದ ತನಿಖಾ ವರದಿಯನ್ನು ಪಡೆಯಬಹುದಾಗಿ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com