ಬಾಂಬ್ ಬೆದರಿಕೆ ಹಿನ್ನೆಲೆ: ಟರ್ಕಿಶ್ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ
ನವದೆಹಲಿ: ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಟರ್ಕಿಶ್ ವಿಮಾನ ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.ಬ್ಯಾಂಕಾಕ್ ನಿಂದ ಇಸ್ತಾಂಬುಲ್ ಗೆ ಟರ್ಕಿಶ್ ಟಿಕೆ-65 ವಿಮಾನ ತೆರಳುತ್ತಿತ್ತು. 148 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.
ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಇನ್ನು ವಿಮಾನ ನಿಲ್ದಾಣದಲ್ಲಿ ಎನ್ ಎಸ್ ಜಿ ಸಿಬ್ಬಂದಿ ಸೇರಿದಂತೆ ಎಲ್ಲಾ ಸೇರಿದಂತೆ ಎಲ್ಲಾ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.
ಟರ್ಕಿಶ್ ವಿಮಾನವನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕ ಜಾಗದಲ್ಲಿ ಲ್ಯಾಂಡ್ ಮಾಡಲಾಗಿದ್ದು, ಎನ್ ಎಸ್ ಜಿಯ ಶ್ವಾನ ಪಡೆ, ಬಾಂಬ್ ನಿಷ್ಕ್ರಿಯ ದಳ, ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ. ಈ ಸಂಬಂಧ ಕೇಂದ್ರ ಕೈಗಾರಿಕಾ ರಕ್ಷಣಾ ಪಡೆಯ ಹಿರಿಯ ಅಧಿಕಾರಿಗಳು ಮತ್ತು ಎನ್ ಎಸ್ ಜಿ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದಾರೆ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ