ನಾಳೆಯಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ನಾಳೆಯಿಂದ (ಜು.10) ರಾಜ್ಯಾದ್ಯಂತ ಮತ್ತೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ...
ಮಳೆ
ಮಳೆ

ಬೆಂಗಳೂರು: ನಾಳೆಯಿಂದ (ಜು.10) ರಾಜ್ಯಾದ್ಯಂತ  ಮತ್ತೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ‘ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದ್ದು ಉತ್ತರ ಒಳನಾಡಿನ ಅಲ್ಲಲ್ಲಿ ಚದುರಿದಂತೆ ಮತ್ತು ದಕ್ಷಿಣ ಒಳನಾಡಿನಾದ್ಯಂತ ಸಮೃದ್ಧ ಮಳೆಯಾಗುವ ಸಂಭವವಿದೆ’ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಒಳನಾಡಿನ ಘಟ್ಟಪ್ರದೇಶಗಳ ವ್ಯಾಪ್ತಿಯ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಜುಲೈ 10 ರಿಂದ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗುವ  ಸಾಧ್ಯತೆ ಇದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ

ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಸರಾಸರಿಗಿಂತ ಕಡಿಮೆ ಸುರಿದಿದೆ. ಜೂನ್ 1 ರಿಂದ ಜುಲೈ 8 ರವರೆಗೆ ಮಳೆ ಪ್ರಮಾಣದಲ್ಲಿ ಶೇ 15 ರಷ್ಟು ಕೊರತೆಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ 269 ಮಿ.ಮೀ ಮಳೆಯಾಗಬೇಕಿತ್ತು. ಆದರೆ, ಈ ಬಾರಿ 228 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.


ಏತನ್ಮಧ್ಯೆ,  ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ದಕ್ಷಿಣ ಒಳನಾಡಿನಲ್ಲಿ ಈ ಬಾರಿ ವಾಡಿಕೆಗಿಂತ ಶೇ 13 ರಷ್ಟು ಹೆಚ್ಚು ಮಳೆಯಾಗಿದೆ. ಈ ಪ್ರದೇಶದಲ್ಲಿ ಸರಾಸರಿ 202 ಮಿ.ಮೀ ಮಳೆಯಾಗಬೇಕಿತ್ತು. ಆದರೆ, ಜುಲೈ 8ನೇ ತಾರೀಖಿನವರೆಗೆ 228 ಮಿ.ಮೀ ಮಳೆ ಸುರಿದಿದೆ.

 ಈ ಬಾರಿ ಮೈಸೂರು ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಾಗಿಯೇ ಮಳೆಯಾಗಿದ್ದು, ರಾಯಚೂರು ಜಿಲ್ಲೆಯಲ್ಲಿ ವಾಡಿಕೆಗಿಂತ ತುಂಬಾ ಕಡಿಮೆ ಸುರಿದಿದೆ.. ವಾಡಿಕೆಯಂತೆ ಮೈಸೂರು ಜಿಲ್ಲೆಯಲ್ಲಿ 108 ಮಿ.ಮೀ ಸುರಿಯಬೇಕಿತ್ತು. ಆದರೆ ಅಲ್ಲಿ 186 ಮಿ.ಮೀ ಮಳೆಯಾಗಿದೆ. ಅದೇ ರೀತಿ, 102 ಮಿ.ಮೀ ಮಳೆಯಾಗಬೇಕಿದ್ದ ರಾಯಚೂರು ಜಿಲ್ಲೆಯಲ್ಲಿ ಕೇವಲ 35 ಮಿ.ಮೀ ಮಳೆ ಬಿದ್ದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com