ವ್ಯಾಪಂ ಹಗರಣ: ಸುಪ್ರೀಂ ಆದೇಶ ಸ್ವಾಗತಿಸಿದ ಕಾಂಗ್ರೆಸ್

ಮಧ್ಯಪ್ರದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿರುವ ವ್ಯಾಪಂ ಹಗರಣವನ್ನು ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಒಪ್ಪಿಸಿರುವ ಆದೇಶವನ್ನು ಕಾಂಗ್ರೆಸ್ ಗುರುವಾರ ಸ್ವಾಗತಿಸಿದೆ...
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್
Updated on: 

ನವದೆಹಲಿ: ಮಧ್ಯಪ್ರದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿರುವ ವ್ಯಾಪಂ ಹಗರಣವನ್ನು ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಒಪ್ಪಿಸಿರುವ ಆದೇಶವನ್ನು ಕಾಂಗ್ರೆಸ್ ಗುರುವಾರ ಸ್ವಾಗತಿಸಿದೆ.

ವ್ಯಾಪಂ ಹಗರಣ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು, ಸುಪ್ರೀಂಕೋರ್ಟ್ ನ ಆದೇಶವು ನ್ಯಾಯಾಲಯದ ಮೇಲೆ ಜನರಿಗಿರುವ ನಂಬಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸುಪ್ರೀಂನ ಈ ಆದೇಶಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ದೇಶದಲ್ಲಿಯೇ ಇದೇ ಮೊದಲ ಬಾರಿಗೆ  ಭ್ರಷ್ಟ ರಾಜಕೀಯ ವ್ಯಕ್ತಿಗಳು, ಸರ್ಕಾರಿ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ಪೊಲೀಸ್ ಅಧಿಕಾರಿಗಳೆಲ್ಲರೂ ಸೇರಿ ನಡೆಸಿರುವ ದೊಡ್ಡ ಹಗರಣ ಇದಾಗಿದ್ದು, ಹಗರಣದಲ್ಲಿ ಲಕ್ಷಾಂತರ ಜನ ವಿದ್ಯಾರ್ಥಿಗಳು ಮೋಸ ಹೋಗಿದ್ದಾರೆ.

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಚ ನೀಡಿ ಸೀಟ್ ಪಡೆದ ವಿದ್ಯಾರ್ಥಿಗಳು ಇದೀಗ ಸಂಕಷ್ಟದಲ್ಲಿದ್ದಾರೆ. ಆದರೆ ಲಂಚ ಪಡೆದಿರುವ ಅಧಿಕಾರಿಗಳು ದೇಶದಲ್ಲಿ ರಾಜರೋಷದಿಂದ ಓಡಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಇದೀಗ ಬಂಧಿತರಾಗಿರುವ ವಿದ್ಯಾರ್ಥಿಗಳೇ ಹಗರಣದ ಪ್ರಮುಖ ರುವಾರಿ ಯಾರೆಂಬುದನ್ನು ಹೇಳಲು ಸಾಧ್ಯ ಎಂದು ಹೇಳಿದ್ದಾರೆ.

ಇದೇ ವೇಳೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಮಾತನಾಡಿದ ಅವರು, ದೇವರ ದಯೆ ಚೌಹಾಣ್ ಅವರಿಗೆ ದೇವರು ಈಗಲಾದರೂ ಬುದ್ಧಿಕೊಟ್ಟರಲ್ಲ ಎಂದು ಹೇಳಿದ್ದಾರೆ.

ಮಧ್ಯಪ್ರದೇಶದ ವ್ಯಾಪಂ ಹಗರಣ ದೇಶದಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು. ಹಗರಣಕ್ಕೆ ಸಂಬಂಧಿಸಿದಂತೆ ಕಳೆದ 2 ವರ್ಷದಲ್ಲಿ ಇದುವರೆಗೆ 48 ಸಾಕ್ಷಿಗಳು ನಿಗೂಢವಾಗಿ ಸಾವನ್ನದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿಗಳು ದಾಖಲಾಗಿತ್ತು. ಹೀಗಾಗಿ ಪ್ರಕರಣ ಸಂಬಂಧ ಎಲ್ಲಾ ವಿಚಾರಣೆಯನ್ನು ಜುಲೈ 9 ರಂದು ನಡೆಸುವುದಾಗಿ  ಸುಪ್ರೀಂಕೋರ್ಟ್ ಹೇಳಿತ್ತು. ಇದರಂತೆ ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ವಿಭಾಗೀಯ ಪೀಠ ಪ್ರಕರಣದ ಸಂಬಂಧ ಎಲ್ಲಾ ತನಿಖೆಯನ್ನು ಸಿಬಿಐ ವಶಕ್ಕೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com