ಹದಗೆಟ್ಟ ಹವಾಮಾನ: ಅಮರನಾಥ ಯಾತ್ರೆ ಸ್ಥಗಿತ

ಜಮ್ಮು-ಕಾಶ್ಮೀರದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಹದಗೆಟ್ಟ ಪರಿಣಾಮದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ...
ಅಮರನಾಥ ಯಾತ್ರೆ (ಸಂಗ್ರಹ ಚಿತ್ರ)
ಅಮರನಾಥ ಯಾತ್ರೆ (ಸಂಗ್ರಹ ಚಿತ್ರ)

ಜಮ್ಮು: ಜಮ್ಮು-ಕಾಶ್ಮೀರದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಹದಗೆಟ್ಟ ಪರಿಣಾಮದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗಿಯಿಂದಲೇ ಕಣಿವೆ ಪ್ರದೇಶಗಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹವಾಮಾನದ ಪರಿಣಾಮ ದಕ್ಷಿಣ ಕಾಶ್ಮೀರದ ಪಹಲ್ಲಮ್ ಮತ್ತು ಉತ್ತರ ಕಾಶ್ಮೀರದ ಬಲ್ತಾಲ್ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಅಮರನಾಥ ಯಾತ್ರಿಗಳನ್ನು ಬಲ್ತಾಲ್ ಹಾಗೂ ಪಹಲ್ಲಮ್ ಶಿಬಿರಗಳಲ್ಲೇ ಉಳಿಸಲಾಗಿದೆ. ಹವಾಮಾನ ಸುಧಾರಣೆಯ ನಂತರವಷ್ಟೇ ಯಾತ್ರೆ ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಗಳ ಪವಿತ್ರ ಸ್ಥಳವಾಗಿರುವ ಅಮರನಾಥ್ ಹಿಮಲಿಂಗದ ದರ್ಶನ ಪಡೆಯಲು ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ಈ ಮಾರ್ಗದಲ್ಲಿ ತೆರಳುತ್ತಿದ್ದಾರೆ. ಎಲ್ಲ ಭಕ್ತರಿಗೂ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com