
ಹೈದರಾಬಾದ್: ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಭೇಟಿಯಿಂದ ಗಮನಾರ್ಹ ಫಲಿತಾಂಶವನ್ನು ನಿರೀಕ್ಷಿಸಬಾರದು ಎಂದು ಕಾಂಗ್ರೆಸ್ ಸಲಹೆ ನೀಡಿದೆ.
2016 ರಲ್ಲಿ ನಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲು ಇಸ್ಲಾಮಾಬಾದ್ ಗೆ ಭೇಟಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು ಮೋದಿ ಭೇಟಿಯಿಂದ ದ್ವಿಪಕ್ಷೀಯ ಸಂಬಂಧದಲ್ಲಿ ಗಮನಾರ್ಹವಾದ ಅಥವಾ ಐತಿಹಾಸಿಕ ಫಲಿತಾಂಶ ನಿರೀಕ್ಷಿಸುವುದಕ್ಕೆ ಸಾಧ್ಯವಿಲ್ಲ. ಪ್ರಧಾನಿ ಮೋದಿ ಸಹ ಇಂತಹ ಫಲಿತಾಂಶವನ್ನು ನಿರೀಕ್ಷಿಸಬಾರದು ಎಂದು ಮಾಜಿ ವಿದೇಶಾಂಗ ಇಲಾಖೆ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಹಲವು ದಶಕಗಳಿಂದ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸಂಬಂಧ ವೃದ್ಧಿಗೊಳಿಸಲು ಭಾರತ ಶ್ರಮಿಸುತ್ತಿದೆ. ಆದರೆ ಅದರಿಂದ ಯಾವುದೇ ಸಕಾರಾತ್ಮಕ ಫಲಿತಾಂಶವೂ ದೊರೆತಿಲ್ಲ. ಅದ್ದರಿಂದ ಪ್ರಧಾನಿ ಮೋದಿ ವರು ಹೆಚ್ಚಿನ ನಿರೀಕ್ಷೆ ಹೊಂದುವುದು ತಪ್ಪು. ಈ ವರೆಗೂ ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಮಾತುಕತೆಯ ಫಲಿತಾಂಶ ತೃಪ್ತಿದಾಯಕವಾಗಿಲ್ಲ. ಈ ಬಾರಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆಯೆ ಹೊರತು ಸಂಭ್ರಮಿಸುವ ಅಗತ್ಯವಿಲ್ಲ ಎಂದು ಹೇಳಿದೆ.
ಪಾಕಿಸ್ತಾನದಲ್ಲಿ ಸೇನೆಯ ಪಾತ್ರ ಏನೆಂಬುದು ನಮಗೆ ತಿಳಿದಿದೆ. ಆದ್ದರಿಂದ ದ್ವಿಪಕ್ಷೀಯ ಮಾತುಕತೆ ನಡೆದರೂ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಖುರ್ಷಿದ್ ಹೇಳಿದ್ದಾರೆ. ಪಾಕಿಸ್ತಾನದೊಂದಿಗೆ ಮಾತುಕತೆ ಪ್ರಾಂಭಿಸಿರುವ ಮೋದಿ ಕ್ರಮಕ್ಕೆ ಕಾಂಗ್ರೆಸ್ ಬೆಂಬಲವಿದೆ. ನಮ್ಮೊಂದಿಗೆ ಮೋದಿ ಮಾತನಾಡುವುದಿಲ್ಲ. ನಮ್ಮೊಂದಿಗೆ ಮಾತನಾಡುವವರೆಗೂ ಪಾಕಿಸ್ತಾನದೊಂದಿಗೆ ಮೋದಿ ಏನು ಮಾತನಾಡಿದರು ಎಂಬುದು ನಮಗೆ ತಿಳಿಯುವುದಿಲ್ಲ ಎಂದು ಖುರ್ಷಿದ್ ಹೇಳಿದ್ದಾರೆ.
Advertisement