ಭೂಸ್ವಾಧೀನ ವಿಧೇಯಕ ಮುಂದಿನ ವಾರ ಸಿಎಂಗಳ ಜತೆ ಪ್ರಧಾನಿ ಮೋದಿ ಚರ್ಚೆ

ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಮತ್ತೊಂದು ಪ್ರಯತ್ನವೆಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ...
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಮತ್ತೊಂದು ಪ್ರಯತ್ನವೆಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮುಂದಿನ ವಾರ ಈ ಸಭೆ ನಡೆಯಲಿದ್ದು, ವಿವಾದಾತ್ಮಕ ಭೂಸ್ವಾಧೀನ ವಿಧೇಯಕದ ಬಗ್ಗೆ ಸಿಎಂಗಳೊಂದಿಗೆ ಪ್ರಧಾನಿ ಚರ್ಚಿಸಲಿದ್ದಾರೆ. ಹೇಗಾದರೂ ಮಾಡಿ ಈ ವಿಧೇಯಕದ ವಿಚಾರದಲ್ಲಿ ಒಮ್ಮತ ಮೂಡಿಸಬೇಕೆಂಬುದು ಈ ಸಭೆಯ ಉದ್ದೇಶವಾಗಿದೆ. ಪ್ರಧಾನಿ ಮೋದಿ ಅವರು ಸಂಸತ್‍ನ ಮುಂಗಾರು ಅಧಿವೇಶನ ಆರಂಭವಾಗುವ ಒಂದು ವಾರ ಮೊದಲು ಅಂದರೆ ಜು.15ರಂದು ನೀತಿ ಆಯೋಗದ ಆಡಳಿತ ಮಂಡಳಿಯ ಎರಡನೇ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆಯಾಗಲಿದ್ದು, ಭೂಸ್ವಾಧೀನ ವಿಧೇಯಕಕ್ಕೆ ಆದ್ಯತೆ ನೀಡಲಾಗುವುದು ಎಂದು ನೀತಿ ಆಯೋಗದ ಸದಸ್ಯ ಬಿಬೇಕ್ ದೆಬ್ರಾಯ್ ತಿಳಿಸಿದ್ದಾರೆ. ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಭೂಸ್ವಾಧೀನ ವಿಧೇಯಕ, ಸರಕು ಮತ್ತು ಸೇವಾ ತೆರಿಗೆ, ಕಾರ್ಮಿಕ ವಿಧೇಯಕ ಹಾಗೂ ರಾಜಕೀಯ ಹಗರಣಗಳನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ದಾಳಿ ನಡೆಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸುತ್ತಿವೆ ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com