

ಚೆನ್ನೈ: ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕಾರು ಅಪಘಾತದಲ್ಲಿ ಪಾರಾಗಿದ್ದಾರೆ.
ಚೆನ್ನೈ ಸಮೀಪದ ಗುಂಡಿ ಎಂಬಲ್ಲಿ ಈ ಘಟನೆ ನಡೆದಿದೆ. ಏರ್ ಪೋರ್ಟ್ಗೆ ತೆರಳುತ್ತಿದ್ದ ವೇಳೆ ಚಿದಂಬರಂರ ಬೆಂಗಾವಲು ಪಡೆ ಕಾರು ಅವರ ಕಾರಿಗೆ ಡಿಕ್ಕಿ ಹೊಡೆಯಿತು.
ಮಾಜಿ ಸಚಿವರಿಗೆ ಯಾವುದೇ ಅಪಾಯ ಉಂಟಾಗಿಲ್ಲ. ಆದರೆ ಬೆಂಗಾವಲು ವಾಹನದಲ್ಲಿದ್ದ ನಾಲ್ವರು ಸಿಬ್ಬಂದಿಗೆ ಗಾಯಗಳಾಗಿವೆ. ಘಟನೆಯಲ್ಲಿ ಚಿದಂಬರಂ ಕಾರಿಗೆ ಅಲ್ಪ ಪ್ರಮಾಣದ ಹಾನಿ ಉಂಟಾಗಿದೆ.