
ನವದೆಹಲಿ: ಭಾರತೀಯ ಮೀನುಗಾರರ ಹತ್ಯೆ ಆರೋಪ ಎದುರಿಸುತ್ತಿರುವ ಇಟಲಿಯ ನಾವಿಕ ಮ್ಯಾಸಿಮಿಲಿಯಾನೋ ಲ್ಯಾಟೋರ್ ಗೆ ಇನ್ನೂ 6 ತಿಂಗಳ ಕಾಲ ಇಟಲಿಯಲ್ಲಿರಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.
ವೈದ್ಯಕೀಯ ಕಾರಣಗಳಿಗಾಗಿ ಅವಧಿ ವಿಸ್ತರಿಸುವುದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಈ ಆದೇಶ ನೀಡಿದೆ.
ಇದೇ ವೇಳೆ, ಇದೇ ಪ್ರಕರಣಕ್ಕೆ ಸಂಬಂಧಿಸಿ ಪ್ರಾದೇಶಿಕ ವ್ಯಾಪ್ತಿಯ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಧ್ಯಸ್ಥಿಕೆಗೆ ಇಟಲಿ ಮುಂದಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್.ನರಸಿಂಹ, ಭಾರತ ವಿಚಾರಣೆಯಲ್ಲಿ ಪಾಲ್ಗೊಳ್ಳಲಿದೆ ಎಂದಿದ್ದಾರೆ.
Advertisement