ಭೂಕಾಯ್ದೆ ಕಗ್ಗಂಟು ಹಳ್ಳಿಗಳ ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದೆ: ಮೋದಿ

ಭೂ ಕಾಯ್ದೆ ತಿದ್ದುಪಡಿ ಕಗ್ಗಂಟಾಗಿ ಪರಿಣಮಿಸಿದ್ದು, ಹಳ್ಳಿಗಳ ಅಭಿವೃದ್ಧಿ ಕಾರ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ಭೂ ಕಾಯ್ದೆ ತಿದ್ದುಪಡಿ ಕಗ್ಗಂಟಾಗಿ ಪರಿಣಮಿಸಿದ್ದು, ಹಳ್ಳಿಗಳ ಅಭಿವೃದ್ಧಿ ಕಾರ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

ನೀತಿ ಆಯೋಗದ 2ನೇ ಸಭೆಯಲ್ಲಿ ಮಾತನಾಡಿರುವ ಅವರು, ರಾಜಕೀಯ ತಿಕ್ಕಾಟದಿಂದಾಗಿ ಭೂ ಮಸೂದೆ ತಿದ್ದುಪಡಿಯು ದೇಶದಲ್ಲಿ ಕಗ್ಗಂಟಾಗಿ ಪರಿಣಮಿಸಿದ್ದು, ಇದು ಹಳ್ಳಿ ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಬಡತನ ನಿರ್ಮೂಲನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬರಬೇಕಿದೆ ಎಂದು ಹೇಳಿದ್ದಾರೆ.

ಪರಿಹಾರ ನೀಡುವುದರಲ್ಲಿ ಕೇಂದ್ರ ಹಾಗೂ ರಾಜ್ಯಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಹಳ್ಳಿಗಳ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬರಬಾರದು, ಗ್ರಾಮೀಣ ಅಭಿವೃದ್ಧಿಯಿಂದ ರೈತರಿಗೆ ಲಾಭವಾಗಲಿದೆ. ಈ ಕುರಿತಂತೆ ಮುಂದೆ ಬರುವ ಸಂಸತ್ ಅಧಿವೇಶನದಲ್ಲಿ ಮತ್ತೊಮ್ಮೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com