ಅ.2ರಿಂದ ರಾಮ್‌ಲೀಲಾ ಮೈದಾನದಲ್ಲಿ ಮತ್ತೆ ಅಣ್ಣಾ ಹಜಾರೆ ನಿರಶನ

ಕೇಂದ್ರ ಭೂಸ್ವಾಧೀನ ತಿದ್ದುಪಡಿ ಮಸೂದೆ ವಿರುದ್ಧ ಹಾಗೂ ಸಮಾನ ಹುದ್ದೆ, ಸಮಾನ ಪಿಂಚಣಿ(ಒನ್ ರ್ಯಾಂಕ್ ಒನ್ ಪೆನ್ಷನ್) ಜಾರಿಗೆ ಆಗ್ರಹಿಸಿ....
ಅಣ್ಣಾ ಹಜಾರೆ
ಅಣ್ಣಾ ಹಜಾರೆ

ನವದೆಹಲಿ: ಕೇಂದ್ರ ಭೂಸ್ವಾಧೀನ ಮಸೂದೆ ವಿರುದ್ಧ ಹಾಗೂ ಸಮಾನ ಹುದ್ದೆ, ಸಮಾನ ಪಿಂಚಣಿ(ಒನ್ ರ್ಯಾಂಕ್ ಒನ್ ಪೆನ್ಷನ್) ಜಾರಿಗೆ ಆಗ್ರಹಿಸಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸುತ್ತಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಅಕ್ಟೋಬರ್ 2ರಿಂದ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಮತ್ತೆ ಅನಿರ್ಧಿಷ್ಟಾವಧಿ ಧರಣಿ ನಡೆಸುವುದಾಗಿ ಅಣ್ಣಾ ಹಜಾರೆ ಅವರು ಘೋಷಿಸಿದ್ದಾರೆ.

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಈಗಾಗಲೇ ಕೇಂದ್ರದ ಭೂಸ್ವಾಧೀನ ಮಸೂದೆಯನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಪತ್ರದಲ್ಲಿ ಮಸೂದೆಯನ್ನು ಅಂಗೀಕರಿಸದಂತೆ ಮನವಿ ಮಾಡಿದ್ದರು.

ಇನ್ನು ಒನ್ ರ್ಯಾಂಕ್ ಒನ್ ಪೆನ್ಷನ್ ಸಂಬಂಧ ತಮ್ಮ ಸ್ವಗ್ರಾಮ ರಾಳೆಗಾಂವ ಸಿದ್ಧಿಯಲ್ಲಿ ಮಾಜಿ ರಕ್ಷಣಾ ಅಧಿಕಾರಿಗಳನ್ನು ಭೇಟಿ ಮಾಡಿ, ಹೋರಾಟದ ಬಗ್ಗೆ ಚರ್ಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com