ಸಿಎಸ್ ಕೆ ತಂಡ ಅಮಾನತು ವಿಚಾರ: ಸುಪ್ರಿಂ ಮೆಟ್ಟಿಲೇರಲು ಇಂಡಿಯಾ ಸಿಮೆಂಟ್ ನಿರ್ಧಾರ

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ನ್ಯಾಯಮೂರ್ತಿ ನ್ಯಾ.ಎಂ. ಲೋಧಾ ....
ಸುಪ್ರಿಂ ಕೋರ್ಟ್
ಸುಪ್ರಿಂ ಕೋರ್ಟ್

ಚೆನ್ನೈ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ನ್ಯಾಯಮೂರ್ತಿ ನ್ಯಾ.ಎಂ. ಲೋಧಾ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೆಟ್ಟಿಲೇರಲು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕರಾದ ಇಂಡಿಯಾ ಸಿಮೆಂಟ್ ಲಿಮಿಟೆಡ್ ನಿರ್ಧರಿಸಿದೆ.

ನ್ಯಾಯಾಲಯದಿಂದ ನೇಮಕವಾಗಿದ್ದ ಸಮಿತಿ ಇಂಡಿಯನ್ ಪ್ರೀಮಿಯರ್ ಲೀಗ್ ನ ಎಲ್ಲಾ ಪಂದ್ಯಾವಳಿಗಳಿಂದ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜ್ ಕುಂದ್ರಾ ಸಹಭಾಗಿತ್ವದ ರಾಜಸ್ತಾನ್ ರಾಯಲ್ಸ್ ತಂಡಗಳನ್ನು 2 ವರ್ಷ ಅಮಾನತಿನಲ್ಲಿ ಇಟ್ಟು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಸ್ ಕೆ ತಂಡದ ಮಾಲೀಕರಾದ ಇಂಡಿಯಾ ಸಿಮೆಂಟ್ ಅಮಾನತು ಪ್ರಶ್ನಿಸಿ ಸುಪ್ರಿಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

2 ವರ್ಷಗಳ ಹಿಂದೆ ನಡೆದಿದ್ದ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾ. ಮುದ್ಗಲ್ ಸಮಿತಿ ವರದಿ ನೀಡಿತ್ತು. ಈ ವರದಿ ಆಧರಿಸಿ ಶಿಕ್ಷೆಯ ಪ್ರಮಾಣ ಪ್ರಕಟಿಸಿಲು ನ್ಯಾಯಾಲಯ ನಿವೃತ್ತ ನ್ಯಾಯಮೂರ್ತಿ ಆರ್ ಲೋಧಾ ನೇತೃತ್ವದ ಸಮಿತಿ ರಚಿಸಿತ್ತು. ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಸಂಬಂಧ ನಿನ್ನೆ ಸಮಿತಿ ತೀರ್ಪು ಪ್ರಕಟಿಸಿತ್ತು.

ರಾಜಸ್ತಾನ್ ರಾಯಲ್ಸ್ ಸಹಮಾಲೀಕ ರಾಜ್ ಕುಂದ್ರಾ ಹಾಗೂ ಬಿಸಿಸಿಐ ಮಾಜಿ ಮುಖ್ಯಸ್ಥ ಎನ್ ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಿಪ್ಪನ್ ಇಬ್ಬರಿಗೂ ಕ್ರಿಕೆಟ್ ನಿಂದ ಆಜೀವ ನಿಷೇಧ ಹೇರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com