ನೀಚ ಬುದ್ಧಿ ಬಿಡದ ಪಾಕ್, ಗಡಿಯಲ್ಲಿ ಮತ್ತೆ ಗುಂಡಿನ ದಾಳಿ

ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಮತ್ತೆ ಗುಂಡಿನ ದಾಳಿ ನಡೆಸಿದ್ದು...
ಬಿಎಸ್ಎಫ್ ಯೋಧರು
ಬಿಎಸ್ಎಫ್ ಯೋಧರು

ಜಮ್ಮು: ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಮತ್ತೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ಪಾಕಿಸ್ತಾನ ಮತ್ತೆ ತನ್ನ ಹಳೆ ಚಾಲಿಯನ್ನೇ ಮುಂದುರಿಸಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ಭಾರತೀಯ ಭದ್ರತಾ ಪಡೆ ಯೋಧರು ಪರಿಣಾಮಕಾರಿಯಾಗಿ ಎದುರಿಸಿದ್ದು, ಉಭಯ ದೇಶ ಯೋಧರ ನಡುವೆ ಗುಂಡಿನ ದಾಳಿ ನಡೆಯುತ್ತಿದೆ ಎಂದು ಬಿಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಸಮೀಪದ ಐದು ಹಳ್ಳಿಗಳನ್ನು ಗುರಿಯಾಗಿರಿಸಿಕೊಂಡು ಪಾಕ್ ಸೈನಿಕರು ಸಣ್ಣ ಪ್ರಮಾಣದ ಪಿರಂಗಿಗಳನ್ನು ಸಿಡಿಸುವ ಮೂಲಕ ಭಾರಿ ಗುಂಡಿನ ದಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ನಿನ್ನೆಯಷ್ಟೇ ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಈ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 2 ಯೋಧರು ಗಾಯಗೊಂಡಿದ್ದರು. ಈ ಅಪ್ರಚೋದಿತ ದಾಳಿ ಹಿನ್ನೆಲೆ ಪಾಕ್ ವರ್ತನೆಯನ್ನು ಭಾರತ ತೀವ್ರವಾಗಿ ಖಂಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com