
ಹನುಮಾನ್‍ಗಡ/ನವದೆಹಲಿ: ಭೂಸ್ವಾಧೀನ ವಿಧೇಯಕಕ್ಕೆ ಸಂಬಂಧಿಸಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ`ಒಂದಿಂಚೂ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಬಿಡುವುದಿಲ್ಲ'' ಎಂದು ಶಪಥ ಮಾಡಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಭಾರತೀಯರಿಗೆ ಮಾತ್ರ ಉತ್ತರದಾಯಿತ್ವ ಹೊಂದಿದ್ದಾರೆಯೇ ಹೊರತು ಅಮೆರಿಕ, ಆಸ್ಟ್ರೇಲಿಯದವರಿಗೆ ಅಲ್ಲ ಎಂದು ಲೇವಡಿ ಮಾಡಿದ್ದಾರೆ.
ನೀತಿ ಆಯೋಗದ ಸಭೆಯನ್ನು ಕಾಂಗ್ರೆಸ್ ಮುಖ್ಯಮಂತ್ರಿಗಳು ಬಹಿಷ್ಕರಿಸಿದ ಬೆನ್ನಲ್ಲೇ, ರಾಜಸ್ಥಾನದ ಗ್ರಾಮಗಳಲ್ಲಿ ಗುರುವಾರ 8 ಕಿ.ಮೀ. ಪಾದಯಾತ್ರೆ ನಡೆಸಿದ ರಾಹುಲ್ ಗಾಂಧಿ ಅಲ್ಲಿನ ರೈತರನ್ನುದ್ದೇಶಿಸಿ ಮಾತನಾಡಿದರು. ``ನೀವೆಲ್ಲರೂ ದಬ್ಬಾಳಿಕೆಗೆ ಒಳಗಾಗಿದ್ದೀರಿ. ಆದರೂ ನೀವು ಚಿಂತೆ ಪಡಬೇಕಾಗಿಲ್ಲ. ನಿಮ್ಮ ಒಂದು ಇಂಚು ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳಲು ನಾವು ಬಿಡುವುದಿಲ್ಲ'' ಎಂದರು ಕೇಂದ್ರದ ಪ್ರತಿಕ್ರಿಯೆಕೇಳಿದ ಸುಪ್ರೀಂ: ಭೂಸ್ವಾಧೀನ ಸುಗ್ರೀವಾಜ್ಞೆಗೆ ಸಂಬಂಧಿಸಿ ಗುರುವಾರ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸುಗ್ರೀವಾಜ್ಞೆಯ ಮರು ಜಾರಿಯನ್ನು ಪ್ರಶ್ನಿಸಿ ರೈತ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, 4 ವಾರಗಳೊಳಗಾಗಿ ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
Advertisement