ದೇಶಾದ್ಯಂತ ಸದ್ಯದಲ್ಲಿಯೇ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ನಿಷೇಧ

ಕೇಂದ್ರ ಸರ್ಕಾರ ಪ್ಲಾಸ್ಟಿಕ್ ನಿಂದ ತಯಾರಿಸಿದ ಧ್ವಜಗಳ ಬಳಕೆ, ಮಾರಾಟ ಮತ್ತು ಖರೀದಿಯನ್ನು...
ಪ್ಲಾಸ್ಟಿಕ್ ಗಳಿಂದ ತಯಾರಿಸಿದ ರಾಷ್ಟ್ರಧ್ವಜ
ಪ್ಲಾಸ್ಟಿಕ್ ಗಳಿಂದ ತಯಾರಿಸಿದ ರಾಷ್ಟ್ರಧ್ವಜ

ನವದೆಹಲಿ: ಇನ್ನು ಮುಂದೆ ದೇಶಾದ್ಯಂತ ಪ್ಲಾಸ್ಟಿಕ್ ಗಳಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸುವಂತಿಲ್ಲ.  ಕೇಂದ್ರ ಸರ್ಕಾರ ಪ್ಲಾಸ್ಟಿಕ್ ನಿಂದ ತಯಾರಿಸಿದ ಧ್ವಜಗಳ ತಯಾರಿಕೆ, ಮಾರಾಟ ಮತ್ತು ಖರೀದಿಯನ್ನು ನಿಷೇಧಿಸಲಿದೆ.

ಪ್ಲಾಸ್ಟಿಕ್ ನಿಂದ ತಯಾರಿಸಿದ ರಾಷ್ಟ್ರಧ್ವಜಗಳ ಬಳಕೆಯನ್ನು ನಿಷೇಧಿಸಿ ಸದ್ಯದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಕಾರ್ಯಕ್ರಮಗಳು ಮುಗಿದ ನಂತರ ರಸ್ತೆ ಮೇಲೆ, ಚರಂಡಿಗಳಲ್ಲಿ ಎಲ್ಲೆಂದರಲ್ಲಿ ರಾಷ್ಟ್ರಧ್ವಜಗಳು ಬಿದ್ದಿರುತ್ತವೆ. ಇದರಿಂದ ಪರಿಸರ ಹಾನಿಯಾಗುವುದಲ್ಲದೆ, ರಾಷ್ಟ್ರಧ್ವಜ ತನ್ನ ಮೌಲ್ಯ ಕಳೆದುಕೊಳ್ಳುತ್ತದೆ ಎಂದು ಮುಂಬೈ ಹೈಕೋರ್ಟ್ ಹೇಳಿದೆ. ಇದಕ್ಕೊಂದು ವಿಸ್ತಾರವಾದ ನೀತಿ ರೂಪಿಸುವಂತೆ ಮಪಾರಾಷ್ಟ್ರ ಸರ್ಕಾರಕ್ಕೆ ಕಳೆದ ಮಾರ್ಚ್ ತಿಂಗಳಿನಲ್ಲಿ ಮಪಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ಪ್ಲಾಸ್ಟಿಕ್ ಗಳಿಂದ ರಾಷ್ಟ್ರಧ್ವಜ ತಯಾರಿಸುವುದನ್ನು ನಿಷೇಧಿಸುವ ಪ್ರಸ್ತಾವನೆ ಬಾಕಿ ಉಳಿದುಕೊಂಡಿದೆ ಎಂದು ಹೇಳಿದೆ.

'ಸರ್ಕಾರ ಸವಿಸ್ತಾರವಾದ ನೀತಿಯನ್ನು ತರಬೇಕಿದೆ. ಶಾಲಾ ಪಠ್ಯಪುಸ್ತಕದಲ್ಲಿ ರಾಷ್ಟ್ರಗೀತೆಯನ್ನು ಮುದ್ರಿಸಿದಂತೆ ರಾಷ್ಟ್ರಧ್ವಜದ ಬಗ್ಗೆಯೂ ಸಂದೇಶ ಮತ್ತು ಪ್ರತಿಜ್ಞೆ ಬರೆದು ಮುದ್ರಿಸಬೇಕು.ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮುಂಬೈ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com