ಮುಂಗಾರು ಅಧಿವೇಶನಕ್ಕೂ ಮುನ್ನ ಸಭೆ ಕರೆದ ನರೇಂದ್ರ ಮೋದಿ

ಸದ್ಯದಲ್ಲಿಯೇ ಪ್ರಾರಂಭವಾಗುವ ಮುಂಗಾರು ಅಧಿವೇಶನ ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಕುರಿತಂತೆ ಚರ್ಚೆ ನಡೆಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಭೆ ನಡೆಸಲು ತೀರ್ಮಾನ ಕೈಗೊಂಡಿದ್ದು, ಎನ್ ಡಿಎ ಸರ್ಕಾರದ ಎಲ್ಲಾ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ ಎಂದು...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ಸದ್ಯದಲ್ಲಿಯೇ ಪ್ರಾರಂಭವಾಗುವ ಮುಂಗಾರು ಅಧಿವೇಶನ ಸಂಬಂಧಿಸಿದಂತೆ ಪ್ರಮುಖ ವಿಷಯಗಳ ಕುರಿತಂತೆ ಚರ್ಚೆ ನಡೆಸುವ ಸಲುವಾಗಿ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಭೆ ನಡೆಸಲು ತೀರ್ಮಾನ ಕೈಗೊಂಡಿದ್ದು, ಎನ್ ಡಿಎ ಸರ್ಕಾರದ ಎಲ್ಲಾ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ ಎಂದು ಭಾನುವಾರ ತಿಳಿದುಬಂದಿದೆ.

ನಾಳೆ ನಡೆಯಲಿರುವ ಪ್ರಧಾನಿ ನೇತೃತ್ವದ ಸಭೆಯಲ್ಲಿ ಎನ್ ಡಿಎ ಸರ್ಕಾರ ಎಲ್ಲಾ ನಾಯಕರಿಗೂ ಆಹ್ವಾನ ನೀಡಲಾಗಿದ್ದು, ಸಭೆಯಲ್ಲಿ ಪ್ರಮುಖವಾಗಿ ವ್ಯಾಪಂ ಹಗರಣ, ಲಲಿತ್ ಮೋದಿ ವಿವಾದ, ಜಾತಿ ಜನಗಣತಿ ಹಾಗೂ ವಿವಾದಿತ ಭೂ ಸ್ವಾಧೀನ ಕಾಯ್ದೆ ಕುರಿತಂತೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಮುಂಗಾರು ಅಧಿವೇಶನದ ವೇಳೆ ಎನ್ ಡಿಎ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಹಲವಾರು ತಂತ್ರಗಳನ್ನು ರೂಪಿಸುತ್ತಿದ್ದು, ವಿರೋಧಪಕ್ಷಗಳಿಗೆ ಅಧಿವೇಶನದಲ್ಲಿ ಉತ್ತರ ನೀಡುವ ಸಲುವಾಗಿ ಹಾಗೂ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಕುರಿತಂತೆ ಚರ್ಚೆ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com