ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಪೊಲೀಸ್ ಆಯುಕ್ತರ ಭೇಟಿ

ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಮಹಿಳೆಯರ ರಕ್ಷಣೆಗಾಗಿ...
ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ
ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ
Updated on: 

ನವದೆಹಲಿ: ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್ ಬಸ್ಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಮಹಿಳೆಯರ ರಕ್ಷಣೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದರು.

ದೆಹಲಿಯ ಆನಂದ್ ಪರ್ಬಾತ್ ಪ್ರದೇಶದಲ್ಲಿ 19 ವರ್ಷದ ಯುವತಿಯ ಭೀಕರ ಕೊಲೆಯ ನಂತರ ನಗರದ ಕಾನೂನು ಸುವ್ಯವಸ್ಥೆ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೇಜ್ರಿವಾಲ್ ಪೊಲೀಸ್ ಆಯುಕ್ತ ಬಸ್ಸಿಗೆ ಸಮನ್ಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ಬಿ.ಎಸ್ ಬಸ್ಸಿ ಮಹಿಳೆಯರ ರಕ್ಷಣೆಗಾಗಿ ಇಲಾಖೆ ಕೈಗೊಂಡಿರುವ ಕಾನೂನು ಕ್ರಮಗಳ ವಿವರಣೆ ನೀಡಿದರು ಎನ್ನಲಾಗಿದೆ.

ದೆಹಲಿಯಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಬಾಕಿ ಉಳಿದಿರುವ ಅಪರಾಧ ಪ್ರಕರಣಗಳ ಪಟ್ಟಿ ತರಲು ಸಿಎಂ ಕಚೇರಿ ಬಸ್ಸಿ ಅವರಿಗೆ ಸೂಚಿಸಿತ್ತು ಎಂದು ಮೂಲಗಳು ತಿಳಿಸಿವೆ.ಜೊತೆಗೆ ರಾತ್ರಿ ಗಸ್ತಿನಲ್ಲಿರುವ ಪೇದೆಗಳು ಹಾಗೂ ಇನ್ಸ್ ಪೆಕ್ಟರ್ ಗಳ ಲಿಸ್ಟ್ ತರಲು ಸಹ ಕೇಜ್ರಿವಾಲ್ ಸೂಚಿಸಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com