
ಮುಂಬಯಿ:ಧಾರಾಕಾರ ಮಳೆಯಿಂದಾಗಿ ವಾಣಿಜ್ಯ ನಗರಿ ಮುಂಬಯಿ ಮತ್ತೆ ತತ್ತರಿಸಿದೆ, ಇಂದು ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ಮುಂಬಯಿನ ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಛತ್ರಪತಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣ ಸುಮಾರು 15 ನಿಮಿಷ ತಡವಾಗಿ ಪ್ರಯಾಣ ಆರಂಭವಾಯಿತು. ಆದರೆ ಯಾವುದೇ ವಿಮಾನ ಪ್ರಯಾಣ ರದ್ದಾಗಿಲ್ಲ. ಇನ್ನು ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಇನ್ನು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ, ಮಳೆಯಿಂದಾಗಿ ಬಾಂದ್ರಾ ಲಿಂಕ್ ರೋಡ್ ನಲ್ಲಿರುವ ಪಾದರಕ್ಷೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಆದರೆ ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ 445 ಮಿ,ಮೀ ಮಳೆಯಾಗಿರುವ ವರದಿಯಾಗಿದ್ದು, ಪಲ್ಗಾರ್ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಅಹಮದಾಬಾದ್ ಎಕ್ಸ್ ಪ್ರೆಸ್ ಸೇರಿದಂತೆ ಹಲವು ರೈಲು ಸಂಚಾರ ರದ್ದಾಗಿದೆ,
Advertisement