ವಿಪಕ್ಷಗಳಿಗೆ ಚರ್ಚೆಗಿಂತ ಗದ್ದಲ ಮಾಡುವುದರಲ್ಲೇ ಹೆಚ್ಚು ಆಸಕ್ತಿ: ಅರುಣ್ ಜೇಟ್ಲಿ

ಗದ್ದಲ ಉಂಟು ಮಾಡಿ ಕಲಾಪವನ್ನು ವ್ಯರ್ಥ ಮಾಡುತ್ತಿರುವುದಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅರುಣ್ ಜೇಟ್ಲಿ(ಸಂಗ್ರಹ ಚಿತ್ರ)
ಅರುಣ್ ಜೇಟ್ಲಿ(ಸಂಗ್ರಹ ಚಿತ್ರ)
Updated on: 

ಬೆಂಗಳೂರು: ಸಂಸತ್  ನ ಮುಂಗಾರು ಅಧಿವೇಶನ ಪ್ರಾರಂಭವಾದ ಮೊದಲ ದಿನವೇ ಪ್ರತಿಪಕ್ಷಗಳು ಗದ್ದಲ ಉಂಟು ಮಾಡಿ ಕಲಾಪವನ್ನು ವ್ಯರ್ಥ ಮಾಡುತ್ತಿರುವುದಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗದ್ದಲ ಉಂಟು ಮಾಡುತ್ತಿರುವ ವಿರೋಧ ಪಕ್ಷಗಳಿಗೆ ಚರ್ಚೆ ಮಾಡುವುದಕ್ಕೆ ಆಸಕ್ತಿ ಇಲ್ಲ, ಗದ್ದಲ ಮಾಡಿ ಕಲಾಪವನ್ನು ಹಾಳು ಮಾಡುವುದಷ್ಟೆ ಅವರ ಉದ್ದೇಶ ಎಂದು ಜೇಟ್ಲಿ ಆರೋಪಿಸಿದ್ದಾರೆ. ಪ್ರತಿಪಕ್ಷ ಸದಸ್ಯರು ಚರ್ಚೆ ನಡೆಯಬೇಕೆಂದು ಹೇಳುತ್ತಾರೆ. ಆದರೆ ಅದರಲ್ಲಿ ಪಾಲ್ಗೊಳ್ಳದೇ ಗದ್ದಲ ಉಂಟು ಮಾಡುತ್ತಾರೆ ಎಂದಿದ್ದಾರೆ.

ಲಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ ಆರನ್ ಜೇಟ್ಲಿ ಪ್ರತಿಕ್ರಿಯಿಸಿದ್ದು, ತೀವ್ರ ಕೋಲಾಹಲ ಉಂಟಾದ್ದರಿಂದ ಸದನವನ್ನು ಮುಂದೂಡಲಾಗಿದೆ. ಸರ್ಕಾರ ಯಾವ ಕ್ಷಣದಲ್ಲಿಯೂ ಚರ್ಚೆ ನಡೆಸಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.

ಲಲಿತ್ ಮೋದಿ ಪ್ರಕರಣದ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟನೆ ನೀಡಲು ಸಿದ್ಧರಿದ್ದಾರೆ. ಆದರೆ ಅದನ್ನು ಕೇಳಿಸಿಕೊಳ್ಳಲು ವಿರೋಧ ಪಕ್ಷದ ಸದಸ್ಯರು ಸಿದ್ಧರಿಲ್ಲ. ಮೊದಲು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿ  ಆ ನಂತರ ಸುಷ್ಮಾ ಸ್ವರಾಜ್ ಸ್ಪಷ್ಟನೆ ನೀಡಬಹುದು ಎಂದು ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com