ಗುರುವಾಯೂರು ಶ್ರೀಕೃಷ್ಣ ದೇವಸ್ಥಾನ
ದೇಶ
ಶ್ರೀಕೃಷ್ಣ ದೇಗುಲಕ್ಕೆ ಬಾಂಬ್ ಬೆದರಿಕೆ
ಕೇರಳದ ಗುರುವಾಯೂರುನಲ್ಲಿರುವ ಶ್ರೀಕೃಷ್ಣ ದೇವಾಲಯಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಕರೆ...
ತ್ರಿಶೂರ್: ಕೇರಳದ ಗುರುವಾಯೂರುನಲ್ಲಿರುವ ಶ್ರೀಕೃಷ್ಣ ದೇವಾಲಯಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಕರೆ ಬಂದಿದೆ.
ಮುಂದಿನ 24 ಗಂಟೆಗಳಲ್ಲಿ ದೇವಾಲಯದಲ್ಲಿ ಭಾರಿ ಸ್ಫೋಟ ನಡೆಯಲಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೇವ ಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕರೆ ಬಂದಿರುವುದು ಮಧ್ಯ ಪ್ರಾಚ್ಯ ರಾಷ್ಟ್ರದಿಂದ ಎಂದಿರುವ ಪೊಲೀಸರು, ಕರೆ ಬಂದೊಡನೆ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ದೇವಸ್ಥಾನಕ್ಕೆ ಕರೆಸಿ ತಪಾಸಣೆ ನಡೆಸಲಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ