ಡ್ರಗ್ಸ್ ಜೊತೆ ರಾಹುಲ್ ಗಾಂಧಿ ಅಮೇರಿಕಾದಲ್ಲಿ ಸಿಕ್ಕಿಬಿದ್ದಿದ್ದರು

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 2001 ರಲ್ಲಿ ಅಮೇರಿಕಾದ ಫೆಡರಲ್ ಬ್ಯೂರೋ ಆಫ್ ಇನ್ ವೆಸ್ಟಿಗೇಷನ್ ಅಧಿಕಾರಿಗಳ ಕೈಯ್ಯಲ್ಲಿ ಸಿಕ್ಕಿಬಿದ್ದಿದ್ದರು...
ಸುಬ್ರಮಣಿಯನ್ ಸ್ವಾಮಿ ಮತ್ತು ರಾಹುಲ್ ಗಾಂಧಿ
ಸುಬ್ರಮಣಿಯನ್ ಸ್ವಾಮಿ ಮತ್ತು ರಾಹುಲ್ ಗಾಂಧಿ

ಜೋಧಪುರ: ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಪ್ರಕರಣದಲ್ಲಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ಬೇರೆಯವರನ್ನು ಬೈಯ್ಯುವ ಮೊದಲು ತನ್ನ ಪಕ್ಷದ ಹುಳುಕುಗಳನ್ನು ಸರಿಪಡಿಸಿಕೊಳ್ಳಲಿ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 2001 ರಲ್ಲಿ ಅಮೇರಿಕಾದ ಫೆಡರಲ್ ಬ್ಯೂರೋ ಆಫ್ ಇನ್ ವೆಸ್ಟಿಗೇಷನ್ ಅಧಿಕಾರಿಗಳ ಕೈಯ್ಯಲ್ಲಿ ಸಿಕ್ಕಿಬಿದ್ದಿದ್ದರು. ಈ ವೇಳೆ ರಾಹುಲ್ ಗಾಂಧಿ ಬಳಿ 1.60 ಲಕ್ಷ ಮೌಲ್ಯದ ಮಾದಕ ದ್ರವ್ಯವನ್ನು ಅಧಿಕಾರಿಗಳು ವಶ ಪಡಿಸಿಕೊಂಡಿದ್ದರು  ಎಂದು ಸುಬ್ರಮಣಿಯನ್ ಸ್ವಾಮಿ ವಿವಾದಾತ್ಮಕ ಆರೋಪ ಮಾಡಿದ್ದಾರೆ.

ಆ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಂದು ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಕರೆ ಮಾಡಿ ತಮ್ಮ ಪುತ್ರನನ್ನು ಬಿಡುಗಡೆಗೊಳಿಸುವಂತೆ ಸಹಾಯ ಕೋರಿದ್ದರು. ವಾಜಪೇಯಿ ಅವರು ಅಮೇರಿಕಾ ಅಧ್ಯಕ್ಷ ಜಾರ್ಜ್ ಬುಶ್ ಅವರಿಗೆ ದೂರವಾಣಿ ಕರೆ ಮಾಡಿ ರಾಹುಲ್ ಗಾಂಧಿ ಅವರನ್ನ ಬಿಡುಗಡೆಗೊಳಿಸಿದರು ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಇನ್ನು ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ಅವರನ್ನು ರಾಜೇ ಝಾನ್ಸಿ ರಾಣಿ ಎಂದು ಹೊಗಳಿರುವ ಸುಬ್ರಮಣಿಯನ್ ಸ್ವಾಮಿ, ರಾಜೇ ಬೆಂಬಲಿಸುವುದಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com