ವಿವಾದಿತ ಬಿಜೆಪಿ ನಾಯಕರು ರಾಜಿನಾಮೆ ನೀಡದಿದ್ದರೆ ಪ್ರತಿಭಟನೆ ನಿಲ್ಲಲ್ಲ: ರಾಹುಲ್

ಲಲಿತ್ ಮೋದಿ ಪ್ರಕರಣ ಹಾಗೂ ವ್ಯಾಪಂ ಹಗರಣ ಸಂಬಂಧ ಈಗಾಗಲೇ ವಿವಾದದಲ್ಲಿ ಸಿಲುಕಿರುವ ಬಿಜೆಪಿ ನಾಯಕರು ರಾಜಿನಾಮೆ ನೀಡುವವರೆಗೂ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಲಲಿತ್ ಮೋದಿ ಪ್ರಕರಣ ಹಾಗೂ ವ್ಯಾಪಂ ಹಗರಣ ಸಂಬಂಧ ಈಗಾಗಲೇ ವಿವಾದದಲ್ಲಿ ಸಿಲುಕಿರುವ ಬಿಜೆಪಿ ನಾಯಕರು ರಾಜಿನಾಮೆ ನೀಡುವವರೆಗೂ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

ಮಧ್ಯಪ್ರದೇಶದ ನಿಗೂಢ ಸಾವು ಪ್ರಕರಣ ಬಹುಕೋಟಿ ವ್ಯಾಪಂ ಹಗರಣ ಹಾಗೂ ಅಕ್ರಮ ವೀಸಾ ಪ್ರಕರಣಗಳು ಇದೀಗ ಸಂಸತ್ ನ ಮುಂಗಾರು ಅಧಿವೇಶನದ ಮೂರನೇ ದಿನವನ್ನು ನುಂಗಿ ಹಾಕಿದೆ. ಈ ಕುರಿತಂತೆ ಮಾತನಾಡಿರುವ ರಾಹುಲ್ ಗಾಂಧಿ ಅವರು, ವ್ಯಾಪಂ ಹಗರಣ ಹಾಗೂ ಲಲಿತ್ ಮೋದಿ ಪ್ರಕರಣ ಸಂಬಂಧ ಈಗಾಗಲೇ ವಿವಾದಲ್ಲಿ ಸಿಲುಕಿರುವ ಬಿಜೆಪಿ ನಾಯಕರಾದ ವಸುಂದರಾ ರಾಜೇ, ಸುಷ್ಮಾ ಸ್ವರಾಜ್ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವವರೆಗೂ ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ವಿವಾದಿತ ಪ್ರಕರಣ ಸಂಬಂಧ ಸರ್ಕಾರ ಮಾತನಾಡುವುದಾಗಿ ಹೇಳುತ್ತಿದೆ. ಆದರೆ, ತಮ್ಮ ಪಕ್ಷದ ವಿವಾದಿತ ನಾಯಕರ ರಾಜಿನಾಮೆ ಕೇಳಿದರೆ ಮಾತ್ರ ಪ್ರತಿಕ್ರಿಯೆ ನೀಡುತ್ತಿಲ್ಲ. ಪ್ರಧಾನಮಂತ್ರಿ ಅವರಿಗೆ ನಮ್ಮ ಸಲಹೆ ಇಷ್ಟೇ, ಪಕ್ಷದ ಮೇಲಿನ ನಿಮ್ಮ ವಿಶ್ವಾಸಾರ್ಹತೆ ಇದೀಗ ಜನರ ನಂಬಿಕೆ ಹಾಳಾಗುವುದಕ್ಕೆ ಕಾರಣವಾಗುತ್ತಿದೆ. ವಿವಾದಗಳ ಕುರಿತಂತೆ ಜನರ ಪ್ರಶ್ನೆಗೆ ಉತ್ತರ ನೀಡಿ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳ ಪ್ರತಿಭಟನೆ ಕುರಿತಂತೆ ಈಗಾಗಲೇ ಪ್ರತಿಕ್ರಿಯೆ ನೀಡಿರುವ ಸುಷ್ಮಾ ಸ್ವರಾಜ್ ಅವರು, ಹಗರಣದಿಂದ ಮುಕ್ತಳಾಗಿದ್ದೇನೆ. ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಲು ನಾನು ಸಿದ್ಧಳಿದ್ದೇನೆ. ಆದರೆ, ವಿರೋಧ ಪಕ್ಷಗಳು ಮಾತನಾಡುವುದಕ್ಕೆ ಅವಕಾಶವೇ ನೀಡುತ್ತಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com