ದೇಶದ ಎಲ್ಲಾ ಕಾರಾಗೃಹಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಸುಪ್ರೀಂಕೋರ್ಟ್ ಆದೇಶ

ದೇಶಾದ್ಯಂತ ಕಾರಾಗೃಹಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳಿಗೆ...

ನವದೆಹಲಿ: ದೇಶಾದ್ಯಂತ ಕಾರಾಗೃಹಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿದೆ. ಪೊಲೀಸ್ ಲಾಕ್ ಅಪ್ ಗಳಲ್ಲಿ ಸಹ ಕ್ಯಾಮರಾ ಅಳವಡಿಸಬೇಕೇ, ಬೇಡವೇ ಎಂಬುದನ್ನು ಆಯಾ ರಾಜ್ಯಗಳು ಘಟನೆಗಳನ್ನಾಧರಿಸಿ ನಿರ್ಧರಿಸಬೇಕು ಎಂದು ಸಹ ಸುಪ್ರೀಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಟಿ.ಎಸ್.ಠಾಕೂರ್ ಮತ್ತು ಆರ್. ಭಾನುಮತಿ ಅವರಿದ್ದ ವಿಭಾಗೀಯ ಪೀಠ, ಕಾರಾಗೃಹಗಳಲ್ಲಿ ಒಂದರಿಂದ ಎರಡು ವರ್ಷದ ಒಳಗೆ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. ಪ್ರತಿ ಪೊಲೀಸ್ ಠಾಣೆಗಳಲ್ಲಿ ಇಬ್ಬರು ಮಹಿಳಾ ಕಾನ್ಸ್ಟೇಬಲ್ ಗಳಿರಬೇಕು ಎಂದು ನಿರ್ದೇಶನ ನೀಡಿದೆ.

ತೀರ್ಪನ್ನು ಫೋಷಿಸಿದ ನ್ಯಾಯಮೂರ್ತಿ ಠಾಕೂರ್, ಎಲ್ಲಾ ರಾಜ್ಯ ಸರ್ಕಾರಗಳು ಮಾನವ ಹಕ್ಕು ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಮೂರು ತಿಂಗಳೊಳಗೆ ತುಂಬಬೇಕು. ದೆಹಲಿ ಸೇರಿದಂತೆ ಹಲವು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾನವ ಹಕ್ಕು ಆಯೋಗ ಇಲ್ಲದಿದ್ದು, ಮಾನವ ಹಕ್ಕು ಆಯೋಗವನ್ನು ಸ್ಥಾಪಿಸಬೇಕು ಎಂದು ಹೇಳಿದೆ.

ನಮ್ಮ ದೇಶದಲ್ಲಿ ಕಾರಾಗೃಹಗಳ ಪರಿಸ್ಥಿತಿಯಲ್ಲಿ ಸುಧಾರಣೆ ತರುವಂತೆ ಮತ್ತು ರಾಜ್ಯ ಮಾನವ ಹಕ್ಕು ಆಯೋಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ದಿಲೀಪ್ ಕೆ. ಬಸು ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com