
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ಅರಿವಿಲ್ಲದ ಹೇಳಿಕೆ ನೀಡುತ್ತಿದ್ದು, ರಾಹುಲ್ ಗಾಂಧಿ ಕೂಡಲೇ ಸುಷ್ಮಾ ಬಳಿ ಕ್ಷಮೆ ಕೇಳಬೇಕು. ಒಂದು ವೇಳೆ ಕೇಳದಿದ್ದರೆ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.
ಸುಷ್ಮಾ ಸ್ವರಾಜ್ ಕುರಿತಂತೆ ರಾಹುಲ್ ಗಾಂಧಿ ಅವರು ಅತೀ ಸೂಕ್ಷ್ಮ ಹಾಗೂ ಅವಮಾನಕಾರಿ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಸುಷ್ಮಾ ಈ ವರೆಗೂ ಯಾವುದೇ ರೀತಿಯಲ್ಲೂ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿಲ್ಲ ಹಾಗೂ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಹಾಗಾಗಿ ರಾಹುಲ್ ಗಾಂಧಿ ಕೂಡಲೇ ಸುಷ್ಮಾ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆದುಕೊಂಡು ಕ್ಷಣೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಅಕ್ರಮ ವೀಸಾ ಸಂಬಂಧಿಸಿದ ಲಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಅಪರಾಧ ಮಾಡಿರುವುದು ಇಡೀ ದೇಶಕ್ಕೆ ತಿಳಿದಿರುವ ವಿಚಾರ. ಅವರ ಮೇಲೆ ಯಾರು ಬೇಕಾದರೂ ಅಪರಾಧ ಪ್ರಕರಣ ದಾಖಲಿಸಬಹುದು. ಆದರೆ, ಸುಷ್ಮಾ ವಿರುದ್ದ ಪ್ರಕರಣ ದಾಖಲಿಸುವವರೇ ಇದೀಗ ಜೈಲಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಸುಷ್ಮಾ ಸ್ವರಾಜ್ ಅವರನ್ನು ಕೂಡಲೇ ಪಕ್ಷದಿಂದ ವಜಾಗೊಳಿಸಿ ಜೈಲಿಗೆ ಹಾಕಬೇಕು ಎಂದು ಹೇಳಿದ್ದರು.
ಸಂಸತ್ ನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಕಳೆದ 4 ನಾಲ್ಕು ದಿನಗಳಿಂದಲೂ ಕಾಂಗ್ರೆಸ್ ಪಕ್ಷ ಅಕ್ರಮ ವೀಸಾ ಲಲಿತ್ ಮೋದಿ ಪ್ರಕರಣ ಹಾಗೂ ಮಧ್ಯಪ್ರದೇಶದ ನಿಗೂಢ ಸಾವುಗಳ ಬಹುಕೋಟಿ ವ್ಯಾಪಂ ಹಗರಣ ಪ್ರಕರಣಗಳನ್ನಿಡಿದು ಪ್ರತಿಭಟನೆಗಳನ್ನು ನಡೆಸುತ್ತಿದೆ. ಸಂಸತ್ ನಲ್ಲಿ ಪ್ರತಿಪಕ್ಷಗಳು ಸೃಷ್ಟಿಸಿರುವ ಗದ್ದಲದಿಂದಾಗಿ ಅಧಿವೇಶನ ನಡೆಯದೆ ಇದೀಗ ಸೋಮವಾರದವರೆಗೂ ಮುಂದೂಡಲಾಗಿದೆ.
Advertisement