ಮಹಾ ಬಿಜೆಪಿ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಶಿವಸೇನಾ ಆಗ್ರಹ

ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಬಿಜೆಪಿ ಸಚಿವರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆಯಾಗಲಿ ಎಂದು ಮಿತ್ರ ಪಕ್ಷ ಶಿವಸೇನಾ...
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ - ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ - ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಬಿಜೆಪಿ ಸಚಿವರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆಯಾಗಲಿ ಎಂದು ಮಿತ್ರ ಪಕ್ಷ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಶುಕ್ರವಾರ ಆಗ್ರಹಿಸಿದ್ದಾರೆ.

ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಸತ್ಯ ಅಸತ್ಯತೆ ಹೊರಬರಬೇಕಾದರೆ, ತಕ್ಷಣವೇ ತನಿಖೆಗೆ ಆದೇಶಿಸಬೇಕು ಎಂದು ಠಾಕ್ರೆ ಒತ್ತಾಯಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಪಂಕಜ ಮುಂಡೆ ಹಾಗೂ ಶಿಕ್ಷಣ ಸಚಿವ ವಿನೋದ್ ತಾವ್ಡೆ ಅವರ ವಿರುದ್ಧದ ಆರೋಪಗಳ ಬಗ್ಗೆ ಸ್ವತಂತ್ರ ತನಿಖೆಯಾಗಬೇಕು ಎಂದು ಠಾಕ್ರೆ ಅವರು ಪಕ್ಷದ ಮುಖವಾಣಿ ಸಾಮ್ನಾಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಇದೇ ವೇಳೆ, ರಾಜಕೀಯ ಕಾರಣಗಳಿಗಾಗಿ ಆರೋಪ ಮಾಡುವವರಿಗೂ ಎಚ್ಚರಿಕೆ ನೀಡಿರುವ ಠಾಕ್ರೆ, ಒಂದು ವೇಳೆ ಆರೋಪ ಸುಳ್ಳಾದರೆ, ಅಂತವರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com