ಯಾಕೂಬ್ ಮೆಮನ್ ಅರ್ಜಿ ಬಗ್ಗೆ ಅಧಿಕಾರಿಗಳೊಂದಿಗೆ ಮಹಾ ರಾಜ್ಯಪಾಲ ಚರ್ಚೆ

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ಯಾಕೂಬ್ ಮೆಮನ್ ಸಲ್ಲಿಸಿರುವ ಕ್ಷಮಾದಾನದ ಅರ್ಜಿಯ ಕುರಿತು ಮಹಾರಾಷ್ಟ್ರ ರಾಜ್ಯಪಾಲ ಸಿಎಚ್ ...
ಗಲ್ಲು ಶಿಕ್ಷೆ ಜಾರಿಗೊಳಿಸಲು ಸಿದ್ದವಾಗುತ್ತಿರುವ ನಾಗ್ಪುರ ಜೈಲ್ (ಪಿಟಿಐ ಚಿತ್ರ)
ಗಲ್ಲು ಶಿಕ್ಷೆ ಜಾರಿಗೊಳಿಸಲು ಸಿದ್ದವಾಗುತ್ತಿರುವ ನಾಗ್ಪುರ ಜೈಲ್ (ಪಿಟಿಐ ಚಿತ್ರ)

ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ಯಾಕೂಬ್ ಮೆಮನ್ ಸಲ್ಲಿಸಿರುವ ಕ್ಷಮಾದಾನದ ಅರ್ಜಿಯ ಕುರಿತು ಮಹಾರಾಷ್ಟ್ರ ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ರಾವ್ ಅವರು ಗೃಹ ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶನಿವಾರ ಚರ್ಚಿಸಿದ್ದಾರೆ.

ಸುಪ್ರೀಂ ಕೋರ್ಟ್ ಯಾಕೂಬ್ ಮೆಮನ್ ಕ್ಯುರೇಟಿವ್ ಅರ್ಜಿಯನ್ನು ವಜಾಗೊಳಿಸಿದ ಬಳಿಕ, ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ ಮತ್ತೆ ಕ್ಷಮಾದಾನ ಕೋರಿ ಉಗ್ರ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯಪಾಲರಿಗೆ ರವಾನಿಸಿತ್ತು.

ಈ ಸಂಬಂಧ ಇಂದು ರಾಜ್ಯಪಾಲರು ಹೆಚ್ಚುವರಿ ಗೃಹ ಕಾರ್ಯದರ್ಶಿ ಕೆ.ಪಿ.ಬಕ್ಷಿ, ಕಾನೂನು ಮತ್ತು ನ್ಯಾಯಾಂಗ ಇಲಾಖೆ ಅಧಿಕಾರಿಗಳು ಹಾಗೂ ಅಡ್ವೋಕೆಟ್ ಜನರಲ್ ಅನಿಲ್ ಸಿಂಗ್ ಅವರೊಂದಿಗೆ ಚರ್ಚಿಸಿದ್ದಾರೆ.

'ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಆದರೆ ನಿರ್ಧಾರವನ್ನು ರಾಜ್ಯಪಾಲರಿಗೆ ಬಿಡಲಾಗಿದೆ' ಎಂದು ಅಧಿಕೃತ ಮೂಲಗಳು ತಿಳಿಸಿವೆ.

'ಜುಲೈ 30ಕ್ಕೆ ನಿಗದಿಯಾಗಿರುವ ಯಾಕೂಬ್ ಮೆಮನ್‌ನನ್ನು ಗಲ್ಲಿಗೇರಿಸುವ ದಿನಾಂಕವನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಗಲ್ಲಿಗೇರಿಸುವ ದಿನಾಂಕದ ಬಗ್ಗೆ ವಿಶೇಷ ಕೋರ್ಟ್ ರಾಜ್ಯ ಸರ್ಕಾರದ ಗಮನಕ್ಕೆ ತಂದಿದೆ. ಕೋರ್ಟ್ ಆದೇಶಕ್ಕೆ ತಡೆ ಬರುವವರೆಗೆ ಗಲ್ಲಿಗೇರಿಸುವ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೋರ್ಟ್ ಆದೇಶದಂತೆ ಗಲ್ಲಿಗೇರಿಸಲಾಗುತ್ತಿದೆ' ಎಂದು ಉನ್ನತ ಮೂಲಗಳು ತಿಳಿಸಿವೆ.

ಇನ್ನು ಈ ಬಗ್ಗೆ ಸರ್ಕಾರದ ನಿರ್ಧಾರವನ್ನು ಪ್ರಕಟಿಸಲು ನಿರಾಕರಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಜುಲೈ 29ಕ್ಕೆ ಹೇಳಿಕೆ ನೀಡವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com