ಬಿಹಾರ ಚುನಾವಣಾಪೂರ್ವ ಸಮೀಕ್ಷೆ: ನಿತೀಶ್‌-ಲಾಲು ಮೈತ್ರಿಗೆ ಬಹುಮತ, ಮೋದಿಗೆ ಶಾಕ್

ಬಿಹಾರ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಹೇರುತ್ತಿದೆ. ಈ ಮಧ್ಯೆ ಜೆಡಿಯು- ಆರ್‌ಜೆಡಿ ಮೈತ್ರಿಕೂಟವು ಬಹುಮತ ಪಡೆಯಲಿದೆ ಎಂಬ ಚುನಾವಣಾಪೂರ್ವ...
ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್
ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್
Updated on: 

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ಹೇರುತ್ತಿದೆ. ಈ ಮಧ್ಯೆ ಜೆಡಿಯು- ಆರ್‌ಜೆಡಿ ಮೈತ್ರಿಕೂಟವು ಬಹುಮತ ಪಡೆಯಲಿದೆ ಎಂಬ ಚುನಾವಣಾಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದ್ದು, ಬಿಜೆಪಿಗೆ ಶಾಕ್ ನೀಡಿದೆ.

ಬಿಹಾರದಲ್ಲಿ ನಿನ್ನೆಯಷ್ಟೇ ಚುನಾವಣಾ ಪ್ರಚಾರ ಮಾಡಿ ಹೋಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಸಿವಿಸಿಗೆ ಕಾರಣವಾಗಿದೆ. ಎಬಿಪಿ ನ್ಯೂಸ್‌-ನೀಲ್ಸನ್‌ ನಡೆಸಿರುವ ಸಮೀಕ್ಷೆ ಪ್ರಕಾರ ಒಟ್ಟು 243 ಸ್ಥಾನಗಳಲ್ಲಿ ಬಹುಮತಕ್ಕೆ 122 ಸ್ಥಾನಗಳ ಅವಶ್ಯಕತೆಯಿದೆ. ಜೆಡಿಯು-ಆರ್‌ಜೆಡಿ ಕೂಟ 129 ಸ್ಥಾನ ಪಡೆಯುವ ಸಾಧ್ಯತೆ ಇದ್ದು, ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳು 112 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಲಾಗಿದೆ.

ಸುಮಾರು 8,854 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ನಿತೀಶ್‌ ಮೆಚ್ಚಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಶೇ.52 ಜನರು ನಿತೀಶ್‌ ಕುಮಾರ್‌ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ. ಶೇ.42ರಷ್ಟು ಜನ ಬಿಜೆಪಿಯ ಸುಶೀಲ್‌ ಮೋದಿ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com