ಅನಾರೋಗ್ಯ ಹಿನ್ನೆಲೆ ಕಲಾಂ ಅಂತ್ಯಕ್ರಿಯೆಗೆ ಜಯಾ ಗೈರು

ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆಯಲ್ಲಿ...
ಜಯಲಲಿತಾ
ಜಯಲಲಿತಾ

ಚೆನ್ನೈ: ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ ಅವರ ಬದಲಾಗಿ ತಮ್ಮ ಸರ್ಕಾರದ ಏಳು ಸಚಿವರನ್ನು ಕಳುಹಿಸುತ್ತಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ತಮಿಳುನಾಡು ಸಿಎಂ, 'ಡಾ.ಕಲಾಂ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ನಾಳೆ ರಾಮೇಶ್ವರಂನಲ್ಲಿ ನಡೆಯುವ ಅವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಬೇಕು ಎಂದುಕೊಂಡಿದ್ದೆ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಯಾಣ ಮಾಡುವ ಸ್ಥಿತಿಯಲ್ಲಿಲ್ಲ' ಎಂದು ಹೇಳಿದ್ದಾರೆ.

ಕಲಾಂ ಸಾವು ತುಂಬಾ ನೋವುಂಟು ಮಾಡಿದೆ ಎಂದಿರುವ ಜಯಲಲಿತಾ, ಒಂದು ಬಡ ಕುಟುಂಬದಲ್ಲಿ ಹುಟ್ಟಿ, ಕಠಿಣ ಶ್ರಮದಿಂದ ದೊಡ್ಡ ವ್ಯಕ್ತಿಯಾಗಿ ಬೆಳೆದಿದ್ದಾರೆ. ಅವರ ಯುವಕರಿಗೆ ಸ್ಫೂರ್ತಿಯಾಗಿದ್ದರು ಎಂದು ಹೇಳಿದ್ದಾರೆ.

ತಮಿಳುನಾಡು ಸರ್ಕಾರದ ಪರವಾಗಿ ಹಿರಿಯ ಸಚಿವರಾದ ಓ ಪನ್ನೀರ್ ಸೆಲ್ವಂ, ಆರ್.ವಿಶ್ವನಾಥನ್, ಆರ್. ವೈಥಿಲಿಂಗಂ, ಕೆ.ಪಳನಿಸ್ವಾಮಿ, ಪಿ.ಪಳನಿಯಪ್ಪನ್, ಎಸ್.ಸುಂದರ್‌ರಾಜ್ ಹಾಗೂ ಆರ್‌ಬಿ ಉದಯಕುಮಾರ್ ಅವರು ಕಲಾಂ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ, ಅಂತಿಮ ನಮನ ಸಲ್ಲಿಸಲಿದ್ದಾರೆ ಎಂದು ಜಯಾ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com