

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಮೃತಪಟ್ಟಿದ್ದಾರೆ.
ಪೂಂಚ್‌ನ ಗಡಿ ನಿಯಂತ್ರಣ ರೇಖೆ ಬಳಿ ಕಳೆದ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಸೆಪೊಯ್ ರಚ್ಪಾಲ್ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಗುರುವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
22-ಸಿಖ್ ಯೂನಿಟ್‌ಗೆ ಸೇರಿದ ಸಿಂಗ್ ಅವರನ್ನು ಪರ್ವಿಂದರ್ ಪೊಸ್ಟ್‌ನಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿತ್ತು.