ದೇಶ

ರಾಹುಲ್ ಗಾಂಧಿಯ ಕಳಪೆ ಮಟ್ಟದ ಪ್ರಚಾರದ ಹೇಳಿಕೆ ಕಾಂಗ್ರೆಸ್ ಗೂ ಅನ್ವಯಿಸುತ್ತಾ?: ಅರುಣ್ ಜೇಟ್ಲಿ

'ಕಳಪೆ ಮಟ್ಟದ ಪ್ರಚಾರ'ದ ಹೇಳಿಕೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯಿಸಿದ್ದು ರಾಹುಲ್ ಗಾಂಧಿ ಹೇಳಿಕೆ ಕಾಂಗ್ರೆಸ್ ಗೂ ಅನ್ವಯಿಸುತ್ತಾ ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಯ ಕಳಪೆ ಮಟ್ಟದ ಪ್ರಚಾರದ ಹೇಳಿಕೆ ಕಾಂಗ್ರೆಸ್ ಗೂ ಅನ್ವಯಿಸುತ್ತಾ?: ಅರುಣ್ ಜೇಟ್ಲಿ
ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
Published On :

ನವದೆಹಲಿ: ಆರ್.ಎಸ್.ಎಸ್ ವಿರುದ್ಧ ರಾಹುಲ್ ಗಾಂಧಿ ನೀಡಿದ್ದ 'ಕಳಪೆ ಮಟ್ಟದ ಪ್ರಚಾರ'ದ ಹೇಳಿಕೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯಿಸಿದ್ದು ರಾಹುಲ್ ಗಾಂಧಿ ಹೇಳಿಕೆ ಕಾಂಗ್ರೆಸ್ ಗೂ ಅನ್ವಯಿಸುತ್ತಾ ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಗೆ ಟ್ವಿಟರ್ ನಲ್ಲಿ ತಿರುಗೇಟು ನೀಡಿರುವ ಅರುಣ್ ಜೇಟ್ಲಿ, ರಾಹುಲ್ ಗಾಂಧಿ ಎಫ್ ಟಿಐಐ ನಲ್ಲಿ  ಕಳಪೆ ಮಟ್ಟದ ಪ್ರಚಾರದ ಬಗ್ಗೆ ನೀಡಿರುವ ಹೇಳಿಕೆ ಕಾಂಗ್ರೆಸ್ ಗೂ ಅನ್ವಯವಾಗುತ್ತದೆಯೇ ಎಂದು ಕೇಳಿದ್ದಾರೆ. ಪುಣೆಯ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಗೆ ಭೇಟಿ ನೀಡಿ ಮಾತನಾಡಿದ್ದ ರಾಹುಲ್ ಗಾಂಧಿ, ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಉನ್ನತ ಅಧಿಕಾರಿಗಳ ಮಧ್ಯೆ ಕೂರಿಸಲಾಗುತ್ತಿದೆ. ಆರ್ ಎಸ್ಎಸ್ ಸಂಘಟನೆಯು ತನ್ನ ಶಕ್ತಿ ಬಳಸಿಕೊಂಡು ಕಳಪೆ ಮಟ್ಟದ ಪ್ರಚಾರ ಮಾಡುತ್ತಿದೆ ಎಂದು ಹೇಳಿದ್ದರು.
ಕೇಂದ್ರ ಸರ್ಕಾರ ಎಫ್ ಟಿಐಐ ಅಧ್ಯಕ್ಷ ಸ್ಥಾನಕ್ಕೆ ಗಜೇಂದ್ರ ಚೌಹಾಣ್ ರನ್ನು ನೇಮಕ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ್ದ ರಾಹುಲ್ ಗಾಂಧಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಈ ವೇಳೆ ಆರ್ ಎಸ್ಎಸ್ ಸಂಘಟನೆಯು ತನ್ನ ಶಕ್ತಿ ಬಳಸಿಕೊಂಡು ಕಳಪೆ ಮಟ್ಟದ ಪ್ರಚಾರ ಮಾಡುತ್ತಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.