ಈ ವರ್ಷ 9 ಸಾವಿರದ 700 ಮಹಿಳಾ ಹಕ್ಕು ಉಲ್ಲಂಘನೆ ಕೇಸು ದಾಖಲು: ಮನೇಕಾ ಗಾಂಧಿ

ಗೃಹ ಕಿರುಕುಳ, ಅತ್ಯಾಚಾರ ಸೇರಿದಂತೆ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ 9 ಸಾವಿರದ 700 ಪ್ರಕರಣಗಳು ಈ ಹಣಕಾಸು ವರ್ಷದಲ್ಲಿ ದಾಖಲಾಗಿವೆ...
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ನವದೆಹಲಿ: ಗೃಹ ಕಿರುಕುಳ, ಅತ್ಯಾಚಾರ ಸೇರಿದಂತೆ ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ 9 ಸಾವಿರದ 700 ಪ್ರಕರಣಗಳು ಈ ಹಣಕಾಸು ವರ್ಷದಲ್ಲಿ ದಾಖಲಾಗಿವೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ  ಲೋಕಸಭೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಉತ್ತರ ಪ್ರದೇಶ ರಾಜ್ಯ ಮೊದಲ ಸ್ಥಾನದಲ್ಲಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ವರದಿ ಪ್ರಕಾರ, ಹತ್ತಾರು ಕಾರಣಗಳಿಂದ ಮಹಿಳೆಯರು ಇಂದು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ವರದಕ್ಷಿಣೆ ಕಿರುಕುಳ, ಆಸ್ತಿ ವಿವಾದ, ಲೈಂಗಿಕ ಕಿರುಕುಳ, ಮಹಿಳೆಯರ ಮೂಲಭೂತ ಹಕ್ಕು ಉಲ್ಲಂಘನೆ ಮೊದಲಾದವುಗಳನ್ನು ಒಳಗೊಂಡಿವೆ.

ಕೇವಲ ಉತ್ತರ ಪ್ರದೇಶವೊಂದರಲ್ಲಿಯೇ 6 ಸಾವಿರದ 110 ಪ್ರಕರಣಗಳು ಬೆಳಕಿಗೆ ಬಂದಿದ್ದರೆ, ನಂತರದ ಸ್ಥಾನಗಳಲ್ಲಿ ದೆಹಲಿ(1,179), ಹರ್ಯಾಣ(504), ರಾಜಸ್ತಾನ(447) ಮತ್ತು ಬಿಹಾರ(256) ರಾಜ್ಯಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com