
ನವದೆಹಲಿ: ಇತ್ತೀಚೆಗೆ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಮ್ಯಾಗಿ ನೂಡಲ್ಸ್ ವಿವಾದ ಅಂತಿಮ ಘಟ್ಟಕ್ಕೆ ತಲುಪಿದೆ. ಮ್ಯಾಗಿಯಲ್ಲಿ ಅತ್ಯಧಿಕ ಪ್ರಮಾಣದ ಸೀಸದ ಅಂಶ ಇರುವುದು ಪ್ರಯೋಗಾಲಯದ ಪರೀಕ್ಷೆಯಲ್ಲಿ ಸಾಬೀತಾಗಿದ್ದು ತಿನ್ನಲು ಯೋಗ್ಯವಲ್ಲ ಎಂದು ವರದಿ ತಿಳಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಇದು ರುಜುವಾತಾಗಿದೆ. ನೆಸ್ಲ್ಟೆ ಕಂಪನಿಯ ಮ್ಯಾಗಿ ತಿನ್ನಸು ಯೋಗ್ಯವಲ್ಲ ಎಂದು ವರದಿ ತಿಳಿಸಿದೆ. 13 ಮ್ಯಾಗಿ ಸ್ಯಾಂಪಲ್ ಗಳನ್ನು ತೆಗೆದು ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ 10 ಮ್ಯಾಗಿಯಲ್ಲಿ ಅತ್ಯಧಿಕ ಪ್ರಮಾಣದ ಸೀಸದ ಅಂಶ ಇದ್ದು ತಿನ್ನಲು ಅರ್ಹವಲ್ಲ ಎಂದು ವರದಿ ತಿಳಿಸಿದೆ.
ಇನ್ನು ದೇಶದ ವಿವಿಧ ರಾಜ್ಯಗಳ ಮ್ಯಾಗಿ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು ಇನ್ನು ಎರಡು ಮೂರು ದಿನಗಳಲ್ಲಿ ವರದಿ ಬರಲಿದೆ. ವರದಿ ಬಂದ ತಕ್ಷಣ ನಿಯಮ ಉಲ್ಲಂಘನೆಯಾಗಿದ್ದರೇ ಕಠಿಣ ಕ್ರಮ ಜರುಗಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇರಳದಲ್ಲಿ ಆರಾಹ ಮತ್ತು ನಾಗರಿಕ ಸರಬರಾಜು ನಿಗಮ ರಾಜ್ಯಾದ್ಯಂತ ಮ್ಯಾಗಿ ಮಾರಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.
Advertisement