ಯೋಗ ದಿನಾಚರಣೆ: ಮೋದಿ ಸರ್ಕಾರದಿಂದ ಸೋನಿಯಾ, ರಾಹುಲ್, ಕೇಜ್ರಿವಾಲ್ಗೆ ಆಹ್ವಾನ

ಜೂನ್ 21ರಂದು ದೆಹಲಿಯ ಐತಿಹಾಸಿಕ ರಾಜಪಥದಲ್ಲಿ ನಡೆಯಲಿರುವ ಮೊದಲ ಯೋಗ ದಿನ ಆಚರಣೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ಜೂನ್ 21ರಂದು ದೆಹಲಿಯ ಐತಿಹಾಸಿಕ ರಾಜಪಥದಲ್ಲಿ ನಡೆಯಲಿರುವ ಮೊದಲ ಯೋಗ ದಿನ ಆಚರಣೆಯಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮೋದಿ ಸರ್ಕಾರ ಆಹ್ವಾನ ನೀಡಿದೆ.

ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವಸಂಸ್ಥೆ ಘೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಸ್ವತಃ ರಾಜಪಥದಲ್ಲಿ ಯೋಗಾಭ್ಯಾಸ ಮಾಡುತ್ತಿದ್ದು, ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಮುಖರಿಗೆ ಕೇಂದ್ರ ಸರ್ಕಾರ ಆಹ್ವಾನ ನೀಡಿದೆ. ಸಂಸತ್ ಸದಸ್ಯರು, ಕೇಂದ್ರ ಸಂಪುಟ ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಶ್ರೀಪಾದ್ ನಾಯ್ಕ್ ಹೇಳಿದ್ದಾರೆ.

ರಾಜಪಥದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಮಕ್ಕಳು, ಪೊಲೀಸರು ಹಾಗೂ ಸೇನೆ ಸೇರಿದಂತೆ 1ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

2014ರ ಸೆ.27ರಂದು ಯುನೆಸ್ಕೋ ಸಭೆ ಉದ್ದೇಶಿಸಿ ಮಾತನಾಡಿದ್ದ ಮೋದಿ, ಜೂನ್‌ 21 ಅನ್ನು ವಿಶ್ವ ಅಂತಾರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಬೇಕು ಎಂದು ಪ್ರಸ್ತಾವಿಸಿದ್ದರು. ಈ ಪ್ರಸ್ತಾವ‌ಕ್ಕೆ ವಿಶ್ವಸಂಸ್ಥೆಯ 177 ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದವು. ಹೀಗಾಗಿ ಮೋದಿ ಪ್ರಸ್ತಾವ ಮಂಡಿಸಿದ ಕೇವಲ 75 ದಿನಗಳಲ್ಲಿ ಅಂದರೆ 2014ರ ಡಿ.11ರಂದು, ಜೂನ್‌ 11 ಅನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ವಿಶ್ವಸಂಸ್ಥೆ ಘೋಷಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com