ಯೋಗ ದಿನದ ಕಾರ್ಯಕ್ರಮಕ್ಕೆ ಗಿನ್ನೆಸ್ ದಾಖಲೆಯ ಯೋಗ

ಜೂ.21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಬೇಕೆಂಬ ಭಾರತದ ಆಸೆ ನೆರವೇರಿದ ಖುಷಿಯ ನಡುವೆಯೇ, ಯೋಗದಲ್ಲಿ ವಿಶ್ವದಾಖಲೆ ಸೃಷ್ಟಿಸುವ ಎಲ್ಲ ಸಿದ್ಧತೆಗಳು ಆರಂಭವಾಗಿವೆ...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Updated on: 

ನವದೆಹಲಿ: ಜೂ.21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಬೇಕೆಂಬ ಭಾರತದ ಆಸೆ ನೆರವೇರಿದ ಖುಷಿಯ ನಡುವೆಯೇ, ಯೋಗದಲ್ಲಿ ವಿಶ್ವದಾಖಲೆ ಸೃಷ್ಟಿಸುವ ಎಲ್ಲ ಸಿದ್ಧತೆಗಳು ಆರಂಭವಾಗಿವೆ.

ನವದೆಹಲಿಯಲ್ಲಿ 21ರಂದು ಬೃಹತ್ ಯೋಗ ಕಾರ್ಯಕ್ರಮ ನಡೆಯಲಿದ್ದು, ಸುಮಾರು 40 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಯೋಗಾಸನ ನಡೆಸಲಿದ್ದಾರೆ. ಹೀಗಾಗಿ ಈ ಮೆಗಾ ಕಾರ್ಯಕ್ರಮವನ್ನು ಗಿನ್ನೆಸ್ ಪುಸ್ತಕದಲ್ಲಿ ದಾಖಲಾಗುವಂತೆ ಮಾಡಲು ಆಯುಶ್ ಸಚಿವಾಲಯ
ಚಿಂತನೆ ನಡೆಸಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಒಂದೇ ಪ್ರದೇಶದಲ್ಲಿ ನಡೆಯಲಿರುವ ಅತಿದೊಡ್ಡ ಯೋಗ ಕಾರ್ಯಕ್ರಮ ಎಂಬ ದಾಖಲೆ ಸೃಷ್ಟಿಯಾಗಲಿದೆ. ಇದೇ ವೇಳೆ, ಈ ಕಾರ್ಯಕ್ರಮಕ್ಕೆ ಸಂಸದ ಅಸಾದುದ್ದೀನ್ ಒವೈಸಿ ಹಾಗೂ ಕೆಲ ಮುಸ್ಲಿಂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com