

ನವದೆಹಲಿ: ಈಚೆಗಷ್ಟೇ ವರ್ಷ ಪೂರೈಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧದ ದಾಳಿಯನ್ನು ತೀವ್ರಗೊಳಿಸಲು ಕಾಂಗ್ರೆಸ್ ಮತ್ತಷ್ಟು ಕ್ರಮಗಳಿಗೆ ಮುಂದಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೇಮೊದಲ ಬಾರಿಗೆ ದೆಹಲಿಯಲ್ಲಿ ಜೂ.9ರಂದು ಪಕ್ಷದ ಆಡಳಿತ ಇರುವ ರಾಜ್ಯಗಳ ಸಿಎಂಗಳ ಸಭೆ ಕರೆಯಲಾಗಿದ್ದು, ಅಂದು ಕೃಷಿ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿ ಚರ್ಚೆ ನಡೆಸಲು ನಿರ್ಧರಿಸಿದೆ. ಸಭೆಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಕಾರ್ಯದರ್ಶಿಗಳೂ ಪಾಲ್ಗೊಳ್ಳಲಿದ್ದಾರೆ