ಮೋಹನ್ ಭಾಗವತ್‌ಗೆ ಝೆಡ್‌ಪ್ಲಸ್ ಭದ್ರತೆ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಕೇಂದ್ರ ಸರ್ಕಾರ ಝೆಡ್ ಪ್ಲಸ್ ಭದ್ರತೆ ಒದಗಿಸಿದ್ದು...
ಮೋಹನ್ ಭಾಗವತ್‌
ಮೋಹನ್ ಭಾಗವತ್‌

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಕೇಂದ್ರ ಸರ್ಕಾರ ಝೆಡ್ ಪ್ಲಸ್ ಭದ್ರತೆ ಒದಗಿಸಿದ್ದು, ಇನ್ನು ಮುಂದೆ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯ ಕಮಾಂಡೋಗಳಿಂದ ರಕ್ಷಣೆ ಪಡೆಯಲಿದ್ದಾರೆ.

ಕೇಂದ್ರ ಗೃಹ ಇಲಾಖೆ ಸಿಐಎಸ್‌ಎಫ್ ಕಮಾಂಡೋಗೆ ಭದ್ರತೆಯ ಜವಾಬ್ದಾರಿ ವಹಿಸಿದ್ದು, ಸಿಐಎಸ್‌ಎಫ್‌ನ 60 ಯೋಧರು ಮೋಹನ್ ಭಾಗವತ್ ಅವರಿಗೆ ಭದ್ರತೆ ಒದಗಿಸಲಿದ್ದಾರೆ.

ಆರ್ಎಸ್ಎಸ್ ಮುಖ್ಯಸ್ಥನಿಗೆ ಬೆದರಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಭಾಗವತ್ ಅವರು ನಾಗ್ಪುರದ ಆರ್ಎಸ್ಎಸ್ ಕಚೇರಿಯಲ್ಲಿರುವಾಗ ಹಾಗೂ ಮಹಾರಾಷ್ಟ್ರ ಸೇರಿದಂತೆ ಇತರೆ ಕಡೆ ಪ್ರಯಾಣ ಬೆಳೆಸುವಾಗ ಸಿಐಎಸ್ಎಫ್ ಕಮಾಂಡೋಗಳು ಭದ್ರತೆ ಒದಗಿಸಲಿದ್ದಾರೆ.

ಆರ್‌ಎಸ್‌ಎಸ್‌ ಸರಸಂಘಚಾಲಕರಿಗೆ ಮುಸ್ಲಿಂ ಮೂಲಭೂತವಾದಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆ ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿತ್ತು. ಹೀಗಾಗಿ ಮಹಾರಾಷ್ಟ್ರ ಪೊಲೀಸರು ಒದಗಿಸಿರುವ ಭದ್ರತೆ ಸಾಲದು ಎಂದು  ಕೇಂದ್ರ ಗೃಹ ಸಚಿವಾಲಯ  ಅವರಿಗೆ ಝೆಡ್‌ಪ್ಲಸ್ ಭದ್ರತೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com